ಅಲ್ಪಸಂಖ್ಯಾತರಿಗೆ ಗುತ್ತಿಗೆ ಬಳಿಕ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳ; ಸಂಪುಟ ಸಭೆಯಲ್ಲಿ ತೀರ್ಮಾನ| reservation

VidhanaSoudha
Published on

ಬೆಂಗಳೂರು: ಸರ್ಕಾರಿ ಯೋಜನೆಗಳ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ ನಂತರ ಇದೀಗ ವಸತಿ ಯೋಜನೆಯಲ್ಲೂ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಮಹತ್ವ ನಿರ್ಧಾರವನ್ನು ಕೈಗೆತ್ತಿಕೊಂಡಿದೆ. ಇಂದು (19) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ ಮಾಡಲಾಗಿದೆ. ವಸತಿಯೋಜನೆಯಡಿ ಮುಸ್ಲಿಂ ಸೇರಿದಂತೆ ಇತರೆ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇನ್ನು ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದ್ದು, ನಗರ ಪ್ರದೇಶದಲ್ಲಿ ಬಹಳಷ್ಟು ಜನರು ಅಲ್ಪಸಂಖ್ಯಾತರಿದ್ದಾರೆ. ಅಲ್ಲಿ ಅನೇಕ ಕಡೆಗಳಲ್ಲಿ ಮನೆಗಳು ಖಾಲಿ ಇವೆ. ಎಷ್ಟೋ ಕಡೆ ಕಟ್ಟಿರೋ ಬಿಲ್ಡಿಂಗ್ ಖಾಲಿ ಇವೆ. ಅಲ್ಪಸಂಖ್ಯಾತರ ಜನಸಂಖ್ಯೆ ಕೂಡ ಹೆಚ್ಚಾಗುತ್ತಲೇ ಇದೆ. ಅಲ್ಪಸಂಖ್ಯಾತರಿಗೆ ಅವಕಾಶ ಕೊಡಬೇಕು. ಹೀಗಾಗಿ ಶೇಕಡಾ 15 ಪರ್ಸೆಂಟ್ ಏರಿಕೆ ಮಾಡಲಾಗುತ್ತಿದೆ. ನಾವು ಬಡವರಿಗೆ ಸಹಾಯ ಮಾಡಲು ಮುಂದಾಗಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಡಿ ನಿಗದಿಪಡಿಸುವ ಗುರಿಯಲ್ಲಿ ಅಲ್ಪಸಂಖ್ಯಾತರಿಗೆ 10% ಮೀಸಲಾತಿ ನಿಗದಿಯಾಗಿದೆ. ಈ ಮೀಸಲಾತಿಯನ್ನು ಇದೀಗ 15% ಏರಿಕೆ ಮಾಡಿ ಕ್ಯಾಬಿನೆಟ್​ ಅನುಮೋದನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net