

ಬೆಂಗಳೂರು: ಶಕ್ತಿ ಯೋಜನೆಯಡಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ- ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿದೆ ಎಂದು ಖಾಸಗಿ ಸಂಸ್ಥೆಯ ಸರ್ವೇಯಲ್ಲಿ ಗೊತ್ತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ - ಧಾರಾವಾಡದಲ್ಲಿ ಶೇ.21ಕ್ಕೆ ಏರಿಕೆ ಆಗಿರುವುದು ಅಧ್ಯಯನದಿಂದ ಬೆಳಕಿಗೆ ಬಂದಿದೆ. ಯೋಜನೆಯಿಂದ ಮಹಿಳೆಯರಿಗೆ ಶೇ.30 ರಿಂದ ಶೇ.50 ಖರ್ಚು ಕಡಿಮೆಯಾಗಿದೆ. ಇದರಿಂದ ಆರ್ಥಿಕ ಬಲ ತುಂಬಿ, ಸ್ವಾವಲಂಬಿಯಾಗಿ ಜೀವನ ನಡೆಸುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕೆಲವರಿಂದ ಕೇಳಿ ಬಂದ ಟೀಕೆಗಳು, ವ್ಯವಸ್ಥಿತ ಅಪಪ್ರಚಾರ ಎಲ್ಲವೂ ಸಾಧನೆಯ ಮುಂದೆ ಮಂಡಿಯೂರಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಪ್ರಶಂಸೆಗೆ ಒಳಗಾಗಿರುವ ಗ್ಯಾರಂಟಿ ಯೋಜನೆಗಳು ನಾಡಿನ ಜನರ ತಲಾದಾಯ ಹೆಚ್ಚಿಸಿ, ಅವರ ಬದುಕಿಗೆ ಆರ್ಥಿಕ ಭದ್ರತೆ ಕಲ್ಪಿಸಿವೆ ಎಂದು ಸಿಎಂ ತಿಳಿಸಿದ್ದಾರೆ.