ಕಿಸಾನ್ ಸಮ್ಮಾನ್ ಮೊತ್ತ ಹೆಚ್ಚಳ ಮಾಡಿ

shantaveri gopal gowda trust memorrendam
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಮೊತ್ತ ಹೆಚ್ಚಳಕ್ಕೆ ಒತ್ತಾಯಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕಲ್ಲೂರು ಮೇಘರಾಜ್, ಎಸ್.ಪಿ.ಶೇಷಾದ್ರಿ, ಎಸ್.ವಿ.ರಾಜಮ್ಮ, ಸುವರ್ಣಾ ನಾಗರಾಜ್ ಇತರರಿದ್ದರು.
Published on

ಶಿವಮೊಗ್ಗ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರಿಗೆ ನೀಡುವ ಮೊತ್ತವನ್ನು ಹೆಚ್ಚಿಸಬೇಕು ಎಂದು ಶಾಂತವೇರಿ ಗೋಪಾಲ ಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ಎರಡು ಸಾವಿರ ರೂ.ನಂತೆ 3 ಕಂತುಗಳಲ್ಲಿ ವಾರ್ಷಿಕ ಆರು ಸಾವಿರ ರೂ. ನೀಡುತ್ತಿದೆ. ಅದನ್ನು ಪ್ರತಿ ಕಂತಿಗೆ 10 ಸಾವಿರ ರೂ.ನಂತೆ ಮೂರು ಕಂತುಗಳಿಗೆ 30 ಸಾವಿರ ರೂ. ನೀಡಬೇಕೆಂದು ಒತ್ತಾಯಿಸಿದರು.
ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಮತ್ತು ಜೀವಹಾನಿ ಉಂಟಾಗುತ್ತಿದೆ. ದೇಶದಾದ್ಯಂತ ಇದುವರೆಗೂ 11 ಕೋಟಿಗೂ ಹೆಚ್ಚು ರೈತರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹಾಗಾಗಿ ಈ ಮೊತ್ತ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ದೊಡ್ಡ ಉದ್ಯಮಿಗಳ ಸಾವಿರಾರು ಕೋಟಿ ರೂ. ಸಾಲವನ್ನು ಮನ್ನಾ ಮಾಡಲಾಗಿದೆ. ಆದರೆ ರೈತರಿಗೆ ಪರಿಹಾರ ನೀಡಲು ಮುಂದೆ ಬರುತ್ತಿಲ್ಲ. ಇದು ಆತಂಕಕಾರಿ ವಿಷಯ. ಸಾವಿರಾರು ರೈತರು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಗಾಗಿ ಮುಂಬರುವ ಬಜೆಟ್‌ನಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಪ್ರಮುಖರಾದ ಎಸ್.ಪಿ.ಶೇಷಾದ್ರಿ, ಎಸ್.ವಿ.ರಾಜಮ್ಮ, ಸುವರ್ಣಾ ನಾಗರಾಜ್, ನರಸಿಂಹಮೂರ್ತಿ, ಪ್ರೊ. ಎಚ್.ಕಲ್ಲನ, ಜನಮೇಜಿ ರಾವ್, ಎಲ್.ಆದಿಶೇಷ, ಬಿ.ಟಿ.ಸೋಮಶೇಖರಯ್ಯ, ಟಿ.ಎಚ್.ಬಾಬು, ಶಂಕರನಾಯ್ಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net