ವಿದ್ಯಾರ್ಥಿ ವೇತನದ ಮೌಲ್ಯ ಹೆಚ್ಚಿಸಿ: ನಾರಾಯಣ್ ರಾವ್

nes programme
ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎನ್‌ಇಎಸ್ ಅಧ್ಯಕ್ಷ ಜಿ.ಎಸ್.ನಾರಾಯಣರಾವ್ ವಿದ್ಯಾರ್ಥಿ ವೇತನ ವಿತರಿಸಿದರು. ಡಾ. ಪಿ.ನಾರಾಯಣ್ ಇದ್ದರು.
Published on

ಶಿವಮೊಗ್ಗ: ವಿದ್ಯಾರ್ಥಿ ವೇತನಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಅದರ ಮೌಲ್ಯವನ್ನು ಹೆಚ್ಚಿಸಬೇಕಿದೆ ಎಂದು ಎನ್‌ಇಎಸ್ (ರಾಷ್ಟ್ರೀಯ ಶಿಕ್ಷಣ ಸಮಿತಿ) ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.

ನಗರದ ಎನ್‌ಇಎಸ್ ಎಜುಕೇಷನ್ ಅಸಿಸ್ಟಾನ್ಸ್ ಟ್ರಸ್ಟ್‌ನಿಂದ ಶನಿವಾರ ಸಂಸ್ಥೆಯ ಸಭಾಂಗಣದಲ್ಲಿ ವಿವಿಧ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.
ಸಾಧಿಸುವ ಕನಸಿಗಿಂತ, ಗೆಲ್ಲುವ ಮನಸ್ಸು ಅಗತ್ಯ. ಸಾಧನೆಯ ಜತೆಯಲ್ಲಿ ಇತರರನ್ನು ಗೆಲ್ಲಿಸುವ ಹಂಬಲ ನಮ್ಮದಾಗಬೇಕು. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದರ ಜತೆಯಲ್ಲಿ ಮುಂದಿನ ದಿನಗಳಲ್ಲಿ ಇತರರಿಗೂ ಸಹಾಯ ಧನ ನೀಡುವ ಮನಸ್ಸು ನಿಮ್ಮದಾಗಲಿ ಎಂದು ಹಾರೈಸಿದರು.
ಎನ್‌ಇಎಸ್ ಎಜುಕೇಷನ್ ಅಸಿಸ್ಟಾನ್ಸ್ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಅಶ್ವಥ ನಾರಾಯಣಶೆಟ್ಟಿ ಮಾತನಾಡಿ, ಸಂಸ್ಥೆ ಕಳೆದ ಅನೇಕ ವರ್ಷಗಳಿಂದ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ ಎಂದರು. ಇದೇ ವೇಳೆ ಈ ಸಾಲಿನಲ್ಲಿ ಎನ್‌ಇಎಸ್‌ನ ವಿವಿಧ ವಿದ್ಯಾಸಂಸ್ಥೆಗಳ ಪ್ರಾಥಮಿಕದಿಂದ ಪದವಿವರೆಗಿನ 320 ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಎನ್.ಟಿ.ನಾರಾಯಣರಾವ್, ಅನಂತದತ್ತ, ಕುಲಸಚಿವ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಲೆಕ್ಕಪತ್ರ ವಿಭಾಗದ ಸಂಜಯ್, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net