ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Formar Suside+1
Published on

ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತನೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಡಗೋಡೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಆನಂದಪ್ಪ ಹನುಮಂತಪ್ಪ ತುಮ್ಮಿನಕಟ್ಟಿ (55) ಮೃತ ರೈತ.
ಇವರು ಬ್ಯಾಂಕ್ ಹಾಗೂ ಖಾಸಗಿ ಫೈನಾನ್ಸ್‌ನಲ್ಲಿ 10.60 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ ಮಳೆ ಕೊರತೆಯಿಂದ ಬೆಳೆ ಹಾಳಾಗಿ ಹೋಗಿದ್ದು, ಇದರಿಂದ ಮನನೊಂದು ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net