ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ‍್ಯೋತ್ಸವ

web 6
Published on

ಧಾರವಾಡ: ಜಿಲ್ಲಾಡಳಿತದಿಂದ ನಗರದ ಡಾ. ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆ. 15ರಂದು ಬೆಳಗ್ಗೆ 9 ಗಂಟೆಗೆ 77ನೇ ಸ್ವಾತಂತ್ರ‍್ಯೋತ್ಸವ ರಾಷ್ಟç ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಮಿಕ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧ್ವಜಾರೋಹಣ ನೆರವೇರಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂಅಹ್ಮದ್ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಽಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಲೋಕೇಶ ಜಗಲಾಸರ್, ಇತರರು ಉಪಸ್ಥಿತರಿರುವರು. ಸಂಜೆ ೫.೩೦ ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಸಭಾಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net