ಮಕ್ಕಳಕೂಟದಲ್ಲಿ ಸ್ವಾತಂತ್ರೋತ್ಸವದ ಸಡಗರ

makkalakoota
Published on

ಬೆಂಗಳೂರು: ನಗರದ ಮಕ್ಕಳಕೂಟ ಆವರಣದಲ್ಲಿ ಮಂಗಳವಾರ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿತ್ತು. ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ ದೇಶದ 77ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರು, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಯಿತು.

ಚಾಮರಾಜಪೇಟೆ ನಿವಾಸಿ ಕ್ಷೇಮಾಭಿವೃದ್ಧಿ ಸಂಘ, ಮಕ್ಕಳಕೂಟದ ಶಟಲ್ ಬ್ಯಾಡ್ಮಿಂಟನ್, ನಡಗೆದಾರರ ಸಂಘ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಪವಾರ್ ಹಾಗೂ ಕ್ಯಾಪ್ಟನ್ ಶ್ರೀಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಅತಿಥಿಗಳು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಹಿರಿಯರ ಹೋರಾಟದ ಕೆಲ ಮಾಹಿತಿಯನ್ನು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಸಂಘದ ಗೌರವ ಅಧ್ಯಕ ಡಾ. ಪ್ರಕಾಶ್, ಅಧ್ಯಕ್ಷ ಸುಬ್ಬಣ್ಣ, ಉಪಾಧ್ಯಕ್ಷ ಡಾ. ಎನ್.ಎಸ್.ಕೃಷ್ಣಮೂರ್ತಿ, ಮಕ್ಕಳಕೂಟ ಖಜಾಂಚಿ ವೆಂಕಟೇಶ್, ಶಟಲ್ ಬ್ಯಾಡ್ಮಿಂಟನ್ ಸಂಘದ ಅಧ್ಯಕ್ಷರು ಹಾಗೂ ಇತರ ಸಂಘದ ಪದಾಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net