

bjp| ತಮಿಳುನಾಡಿನಲ್ಲಿ ಈಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಘೋಷಣೆ ಮಾಡಿದೆ. ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಇಂದು (11) ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಇನ್ನೂ ಈ ಬಗ್ಗೆ ಚೆನ್ನೈನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದು, ನಾನು ನಿಮಗೆ ಶುಭ ಸುದ್ದಿಯನ್ನು ಹೇಳಲು ಬಂದಿದ್ದೇನೆ. 2026 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಮತ್ತೆ ಮೈತ್ರಿ ಮಾಡಿಕೊಂಡಿವೆ, ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಮೈತ್ರಿಕೂಟ ವಿಧಾನಸಭಾ ಚುನಾವಣೆಯಲ್ಲಿ ಎದುರಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
(ಏಜೆನ್ಸೀಸ್)
ಮೈತ್ರಿ ಘೋಷಣೆಯ ಸಮಯದಲ್ಲಿ ಹಿರಿಯ ಎಐಎಡಿಎಂಕೆ ನಾಯಕರಾದ ಕೆಪಿ ಮುನುಸಾಮಿ, ಪಳನಿಸ್ವಾಮಿ, ಮತ್ತು ಎಸ್‌ಪಿ ವೇಲುಮಣಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮತ್ತು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನೈನಾರ್ ನಾಗೇಂದ್ರನ್ ಕೂಡ ಉಪಸ್ಥಿತರಿದ್ದರು.
ಇನ್ನೂ ಈ ಸಂದರ್ಭದಲ್ಲಿ ಈ ಮೈತ್ರಿಕೂಟವು ಪರಸ್ಪರ ಹಿತಾಸಕ್ತಿಯಿಂದ ಹುಟ್ಟಿಕೊಂಡಿದೆ ಮತ್ತು ಎರಡೂ ಪಕ್ಷಗಳು ಈ ಹಿಂದೆ ಒಟ್ಟಿಗೆ ಚುನಾವಣೆ ಎದುರಿಸಿದ್ದವು ಎಂದು ಅಮಿತ್ ಶಾ ನೆನಪಿಸಿಕೊಂಡಿದ್ದಾರೆ.
ಮುಂಬರುವ ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆಯ ಭ್ರಷ್ಟಾಚಾರ, ಕಾನೂನು ಸುವ್ಯವಸ್ಥೆಯ ಸಮಸ್ಯೆಗಳು, ದಲಿತರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಗಮನಿಸಿ ಜನರು ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಡಿಎಂಕೆ ಸರ್ಕಾರವು 39,000 ಕೋಟಿ ರೂ.ಗಳ ಮದ್ಯ ಹಗರಣ, ಇಂಧನ ಹಗರಣ, ಮರಳು ಗಣಿಗಾರಿಕೆ ಹಗರಣ, ಎಲ್‌ಸಿಒಟಿ ಹಗರಣ, ಸಾರಿಗೆ ಹಗರಣ, ಹಣ ವರ್ಗಾವಣೆ ಹಗರಣ ಸೇರಿದಂತೆ ಹಲವು ಹಗರಣಗಳಲ್ಲಿ ಭಾಗಿಯಾಗಿದೆ. ತಮಿಳುನಾಡಿನ ಜನರು ಉದಯನಿಧಿ ಮತ್ತು ಸ್ಟಾಲಿನ್ ಅವರಿಂದ ಉತ್ತರಗಳನ್ನು ಹುಡುಕುತ್ತಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.