ಮುಷ್ಕರ ರಾಜ್ಯದಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ, ಮುಷ್ಕರದ ಹೆಸರಿನಲ್ಲಿ ಶಾಂತಿ ಕದಡಿದರೆ ಕ್ರಮ: ಸಿಎಂ

yediyurappa5
Published on

ಬೆಂಗಳೂರು: ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ ಕರೆ ನೀಡಿರುವ ಬಂದ್ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರಗಳಲ್ಲಿ ಜನ ಜೀವನ ಎಂದಿನಂತೆ ಸಾಮಾನ್ಯವಾಗಿರುತ್ತದೆ. ಅವರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ಅಡ್ಡಿಯಾಗುವುದಿಲ್ಲ.

ಶಾಲಾ, ಕಾಲೇಜು ಕಾರ್ಯನಿರ್ವಹಿಸುತ್ತವೆ. ಸಾರಿಗೆ ವ್ಯವಸ್ಥೆ ಕೂಡ ಸಾಮಾನ್ಯವಾಗಿರುತ್ತದೆ. ಯಾವುದೇ ಸಮಾಜ ವಿರೋಧಿ ಶಕ್ತಿಗಳು ಬಂದ್ ನಲ್ಲಿ ಭಾಗವಹಿಸಲು ಒತ್ತಾಯ ಮಾಡಿದರೆ ಅಥವಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಪ್ರಯತ್ನಿಸಿದರೆ ಪೊಲೀಸರು ಅವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತಾರೆ ಎಂದರು.
ಜನರು ಯಾವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಿಕೊಂಡು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವುದು ಅವರು ಸಿಎಂ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net