ಜ್ಞಾನ ಕೌಶಲಗಳಿಂದ ಭಾರತ ಮುಂಚೂಣಿಯಲ್ಲಿ

seminar
ಶಿವಮೊಗ್ಗ ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು ಎಸ್.ಎನ್.ಚನ್ನಬಸಪ್ಪ ಉದ್ಘಾಟಿಸಿದರು. ಡಾ. ಧನಂಜಯ ಸರ್ಜಿ, ಡಿ.ಎಸ್.ಅರುಣ್, ಪ್ರೊ. ಶಶಿಧರ್ ಇತರರಿದ್ದರು.
Published on

ಶಿವಮೊಗ್ಗ: ಕಲಿಕೆ ನಿರಂತರ ಪ್ರಕ್ರಿಯೆ ಆಗಿದ್ದು, ವಿದ್ಯಾರ್ಥಿಗಳು ಆಧುನಿಕ ಜಗತ್ತಿನಲ್ಲಿ ಅವಶ್ಯವಿರುವ ಕೌಶಲ ಕಲಿಕೆಗೆ ಮುಂದಾಗಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾಶಾಸ್ತ್ರ ವಿಭಾಗದಿಂದ ಶನಿವಾರ ಏರ್ಪಡಿಸಿದ್ದ ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ಕುರಿತ ಒಂದು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಪ್ರಪಂಚದ ಎದುರು ಭಾರತ ಮುಂಚೂಣಿ ದೇಶವಾಗಿರಲು ಸಾಧ್ಯವಾಗಿರುವುದು ಜ್ಞಾನ ಕೌಶಲಗಳಿಂದ. ವಿಜ್ಞಾನ ಕ್ಷೇತ್ರ ಬೆಳೆಯುತ್ತಿದೆ ಎಂದು ತಿಳಿಸಿದರು.

ಮಸ್ಕತ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿ ಆ್ಯಂಡ್ ಅಪ್ಲೈಡ್ ಸೈನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸಂತೋಷ್ ಕುಮಾರ್ ಮಾತನಾಡಿ, ಕೃತಕ ಬುದ್ಧಿಮತ್ತೆಯು ಮನುಷ್ಯನ ಬುದ್ಧಿವಂತಿಕೆಯನ್ನು ಯಂತ್ರಗಳಿಗೆ ಕಲಿಸುವ ವಿಧಾನವಾಗಿದೆ. ಕೃತಕವಾಗಿ ನಿರ್ಧಾರ, ಸಮಸ್ಯೆಗೆ ಪರಿಹಾರ, ಭಾಷೆ ಅರ್ಥಮಾಡಿಕೊಂಡು ಪ್ರತಿಕ್ರಿಯಿಸುವ ವಿಧಾನ ಇರಲಿದೆ ಎಂದರು.

ಕೃಷಿ, ಆಟೋಮೊಬೈಲ್, ಪ್ರವಾಸೋದ್ಯಮ, ಬ್ಯಾಂಕ್, ಶಿಕ್ಷಣ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯನ್ನು ಸಮರ್ಥವಾಗಿ ಬಳಸಲಾಗುತ್ತದೆ. ನಮ್ಮ ಭಾವನೆಗಳನ್ನು ಕೃತಕ ಬುದ್ಧಿಮತ್ತೆಗೆ ಅಳವಡಿಸಿದರೆ ಅದು ಹೇಗೆ ಪ್ರತಿಕ್ರಿಯಿಸುತ್ತದೆ ಎನ್ನುವುದು ಯಕ್ಷಪ್ರಶ್ನೆ. ಡ್ರೋಣ್, ರೋಬೋಟ್‌ಗಳನ್ನು ಕೃಷಿಯಲ್ಲಿ ಬಳಸುವುದರಿಂದ ಉತ್ಪಾದನೆ ಜಾಸ್ತಿ ಮಾಡಬಹುದು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಶಶಿಧರ್, ಇರಾಕ್‌ನ ಟಿಸ್ಕ್ ಇಂಟರ್‌ನ್ಯಾಷನಲ್ ಯೂನಿವರ್ಸಿಟಿಯ ಡಾ. ಗೌಸಿಯ ಕಾತೂನ್, ಬೆಂಗಳೂರಿನ ಕೆಂಗೇರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಮಹಮ್ಮದ್ ಫಾರೂಕ್ ಪಾಶಾ, ಪ್ರಾಚಾರ್ಯ ಪ್ರೊ. ಬಿ.ಜಿ.ಚನ್ನಪ್ಪ, ಐಕ್ಯೂಎಸಿ ಸಂಚಾಲಕ ಡಾ. ವಿದ್ಯಾಮರಿಯ ಜೋಸೆಫ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net