ಭಾರತ-ಪಾಕ್ ಸಂಘರ್ಷ; ಡ್ರೋನ್ ದಾಳಿ ಬೆನ್ನಲ್ಲೇ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಭೆ| Modi meeting

PM Modi
Published on

ನವದೆಹಲಿ; ಪಾಕಿಸ್ತಾನದ ಇಂದಿನ ಹೊಸ ದಾಳಿಯ ನಂತರ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ವಿದೇಶಾಂಗ ಸಚಿವ ಜೈ ಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸಭೆ ಮೋದಿ ನಡೆಸಿದರು. ಈ ವೇಳೆ ಪಾಕಿಸ್ತಾನದ ಡ್ರೋನ್ ದಾಳಿ ತಡೆಯುವುದು ಮತ್ತು ಮುಂದಿನ ಸಂಭಾವ್ಯ ದಾಳಿ ತಡೆಯುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.

ಪಾಕಿಸ್ತಾನ, ಭಾರತದ ಮೇಲೆ ನಿರಂತರ ಡ್ರೋನ್ ದಾಳಿ ನಡೆಸುತ್ತಿದೆ. ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ಪಂಜಾಬ್ ಸೇರಿದಂತೆ ಹಲವೆಡೆ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದೆ. 100ಕ್ಕೂ ಹೆಚ್ಚು ಡ್ರೋನ್‌ಗಳಿಂದ ದಾಳಿ ನಡೆಸಿದ್ದು, ಪಾಕಿಸ್ತಾನದ ಕುತಂತ್ರಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮೀಟಿಂಗ್ ನಡೆಸಿ ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದಾರೆ.

ಶುಕ್ರವಾರ ಶಾಲೆಗಳು ಮತ್ತು ಪ್ರಾರ್ಥನಾ ಸ್ಥಳಗಳು ಸೇರಿದಂತೆ ನಾಗರಿಕ ಮೂಲಸೌಕರ್ಯಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದ್ದಕ್ಕಾಗಿ ವಿದೇಶಾಂಗ ಸಚಿವಾಲಯ ಪಾಕಿಸ್ತಾನವನ್ನು ತೀವ್ರವಾಗಿ ಖಂಡಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ನಿಯಂತ್ರಣ ರೇಖೆಯ ಉದ್ದಕ್ಕೂ ಗುರುದ್ವಾರಗಳು, ಚರ್ಚುಗಳು ಮತ್ತು ದೇವಾಲಯಗಳನ್ನು ಉದ್ದೇಶಪೂರ್ವಕವಾಗಿ ಶೆಲ್ ದಾಳಿ ನಡೆಸಿದ್ದಕ್ಕಾಗಿ ಪಾಕಿಸ್ತಾನವನ್ನು ಟೀಕಿಸಿದ್ದಾರೆ, ಈ ದಾಳಿಗಳ ಮೂಲಕ ಪಾಕಿಸ್ತಾನ ಹಾಗೂ ಅಲ್ಲಿನ ಸೇನೆ ತೀರಾ ಕೆಳಮಟ್ಟಕ್ಕೆ ಇಳಿದಿದೆ ಎಂದು ಅವರು ಟೀಕಿಸಿದ್ದಾರೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net