India-Pakistan Tension: ಸೇನಾ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ

dk - 2025-05-09T221045.078
Published on

India-Pakistan Tension: ಕಳೆದ ಎರಡು ದಿನಗಳಿಂದ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಗಡಿಯಲ್ಲಿ ಭಾರೀ ಉದ್ವಿಗ್ನತೆ ಏರ್ಪಪಟ್ಟಿದ್ದು, ಪಾಕ್​ ನಡೆಸಿದ ಕದನ ವಿರಾಮ ಉಲ್ಲಂಘನೆ ವಿರುದ್ಧ ನಮ್ಮ ಸೇನಾಪಡೆಗಳು ದಿಟ್ಟಾ ಉತ್ತರ ನೀಡಿವೆ. ಇದೀಗ, ಭದ್ರತಾ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉನ್ನತ ರಕ್ಷಣಾ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಅಧಿಕವಾಗುತ್ತಿದ್ದಂತೆ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಮೂರು ಸೇನಾ ಮುಖ್ಯಸ್ಥರು ಮತ್ತು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನು ಭೇಟಿಯಾಗಿ ಭವಿಷ್ಯದ ಕ್ರಮಗಳ ಕುರಿತು ಕಾರ್ಯತಂತ್ರ ರೂಪಿಸಿದ್ದಾರೆ ಎಂದು ವರದಿಯಾಗಿದೆ.

ಮೇ 8 ಮತ್ತು 9ರ ಮಧ್ಯರಾತ್ರಿ ಪಾಕಿಸ್ತಾನ ಮಾಡಿದ ದಾಳಿಯ ಪ್ರಯತ್ನಗಳಿಗೆ ಸಶಸ್ತ್ರ ಪಡೆಗಳು ಪ್ರಮಾಣಾನುಗುಣವಾಗಿ ಮತ್ತು ಸಮರ್ಪಕವಾಗಿ ಪ್ರತಿಕ್ರಿಯಿಸುವುದರೊಂದಿಗೆ ಪಾಕಿಸ್ತಾನದೊಂದಿಗಿನ ಸಂಘರ್ಷ ತೀವ್ರಗೊಂಡಿದೆ.

ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸಿದೆ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net