ಭಾರತಕ್ಕೆ ಡಬ್ಲ್ಯುಎಚ್​ಒ ಅಧ್ಯಕ್ಷ ಸ್ಥಾನ?

page 9 1
Published on

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಜಾಗತಿಕ ಆರೋಗ್ಯ ಸಂಸ್ಥೆಯ ವಾರ್ಷಿಕ ಸಭೆಯ ನಂತರ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್​ಒ)ಯಲ್ಲಿ ಭಾರತ ಪ್ರಮುಖ ನಾಯಕತ್ವದ ಪಾತ್ರ ಪಡೆದುಕೊಳ್ಳಲಿದೆ ಎಂದು ಈ ಬಗ್ಗೆ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಂದ ತಿಳಿದುಬಂದಿದೆ.

ಮೇ 22ರಂದು ಡಬ್ಲ್ಯುಎಚ್​ಒ ಕಾರ್ಯನಿರ್ವಾಹಕ ಮಂಡಳಿಯ ಮೊದಲ ಸಭೆ ನಡೆಯಲಿದ್ದು, ಈ ವೇಳೆ ಭಾರತವನ್ನು ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ. ಅಧ್ಯಕ್ಷ ಸ್ಥಾನದಲ್ಲಿ ಜಪಾನ್​ನ ಅವಧಿ ಮೇ ವೇಳೆಗೆ ಮುಕ್ತಾಯವಾಗಲಿದೆ.

ಡಬ್ಲ್ಯುಎಚ್​ಒ ಕಾರ್ಯನಿರ್ವಾಹಕ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಭಾರತವನ್ನು ಆಯ್ಕೆ ಮಾಡಬೇಕು ಎಂದು ಆಗ್ನೇಯ ಏಷ್ಯಾ ರಾಷ್ಟ್ರಗಳ ಗುಂಪು ಕಳೆದ ವರ್ಷವೇ ಸರ್ವಾನುಮತದಿಂದ ನಿರ್ಧರಿಸಿತ್ತು. ಜತೆಗೆ ಪ್ರಾದೇಶಿಕ ದೇಶಗಳ ಗುಂಪಿನ ಅಧ್ಯಕ್ಷ ಸ್ಥಾನಕ್ಕೂ ಭಾರತವನ್ನು ಆಯ್ಕೆ ಮಾಡಬೇಕು ಎಂದು ಪ್ರಸ್ತಾಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net