ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಶೀಘ್ರ! ಸಕ್ರಿಯ ಮಾತುಕತೆ ನಡೆಯುತ್ತಿದೆ ಎಂದ Minister ಪಿಯೂಷ್​ ಗೋಯಲ್​

Untitled design - 2025-09-10T194308.487
Published on

ಭಾರತವು ಅಮೆರಿಕದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕಾಗಿ ಸಕ್ರಿಯ ಮಾತುಕತೆ ನಡೆಯುತ್ತಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ( Minister ) ಪಿಯೂಷ್​ ಗೋಯಲ್​ ಬುಧವಾರ ಹೇಳಿದ್ದಾರೆ.

ಕೈಗಾರಿಕಾ ಸಂಸ್ಥೆಯಲ್ಲಿ ಬುಧವಾರ ನಡೆದ FICCI ಕಾರ್ಯಕ್ರಮದಲ್ಲಿ ಮಾತನಾಡಿದ ಗೋಯಲ್​, ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯುರೋಪಿಯನ್​ ಒಕ್ಕೂಟದೊಂದಿಗೆ ಮಾತುಕತೆ ನಡೆಯುತ್ತಿದೆ. ಇದಲ್ಲದೇ ಭಾರತವು ನ್ಯೂಜಿಲ್ಯಾಂಡ್ ವ್ಯಾಪಾರ ಒಪ್ಪಂದಕ್ಕಾಗಿ ಕೂಡ ಮಾತುಕತೆ ನಡೆಯುತ್ತಿದೆ​ ಎಂದು ಸಚಿವರು ಹೇಳಿದ್ದಾರೆ.

ಭಾರತವು ಈಗಾಗಲೇ ಮಾರಿಷಸ್, ಯುಎಇ ಮತ್ತು ಆಸ್ಟ್ರೇಲಿಯಾದೊಂದಿಗೆ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದೆ. ಅಲ್ಲದೆ, "ಆಸ್ಟ್ರೇಲಿಯಾ ಜೊತೆಗಿನ ಎರಡನೇ ಹಂತದ ವ್ಯಾಪಾರ ಒಪ್ಪಂದವನ್ನು ಶೀಘ್ರದಲ್ಲೇ ಅಂತಿಮಗೊಳಿಸುತ್ತೇವೆ" ಎಂದು ಸಚಿವರು ತಿಳಿಸಿದರು.

ಶೇ.50ರಷ್ಟು ಸುಂಕ ವಿಧಿಸಿದ ಅಮೆರಿಕ

ಟ್ರಂಪ್​ ಇತ್ತೀಚಿಗೆ 25ರಷ್ಟು ಸುಂಕ ವಿಧಿಸಿದೆ. ಅಲ್ಲದೆ, ರಷ್ಯಾದಿಂದ ತೈಲ ಮತ್ತು ಶಸ್ತ್ರಾಸ್ತ್ರಗಳು ಖರೀದಿಗೆ ಮಾಡುತ್ತಿರುವುದಕ್ಕೆ ಶೇ. 25 ರಷ್ಟು ಸುಂಕ ಹೆಚ್ಚಿಸಿದ್ದಾರೆ. ಇದೀಗ ಭಾರತದ ಮೇಲೆ 50ರಷ್ಟು ಸುಂಕ ವಿಧಿಸಿದ್ದಾರೆ. ಅಲ್ಲದೆ, ಯುಕ್ರೇನ್‌ನಲ್ಲಿ ರಷ್ಯಾದ ಯುದ್ಧಕ್ಕೆ ಭಾರತ ಪರೋಕ್ಷವಾಗಿ ಹಣಕಾಸು ಒದಗಿಸುತ್ತಿದೆ ಎಂದು ಅಮೆರಿಕ ಆರೋಪಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net