

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರತೀಯ ಸೇನೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ್ದು, ಇಬ್ಬರು ಭಯೋತ್ಪಾದಕರನ್ನು (Terrorists Neutralised)ಭದ್ರತಾ ಪಡೆಗಳು ಮಂಗಳವಾರ (ಅ.14) ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಭಾರತೀಯ ಸೇನಾ ಪಡೆಗಳು ಎಲ್ಒಸಿಯಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಕಂಡ ನಂತರ, ಸೇನೆಯು ಶೋಧ ಕಾರ್ಯವನ್ನು ಮುಂದುವರೆಸಿದ್ದು, ಈ ವೇಳೆ ಭಯೋತ್ಪಾದಕರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಚಳಿಗಾಲ ಆರಂಭವಾಗುವ ಮೊದಲು ಪಾಕ್ ಆಕ್ರಮಿತ ಕಾಶ್ಮೀರ ಭಾಗಕ್ಕೆ ಒಳನುಸುಳುವಿಕೆಯು ಸಾಮಾನ್ಯವಾಗಿ ಹೆಚ್ಚಾಗುತ್ತವೆ. ಏಕೆಂದರೆ ಈ ಸಮಯದಲ್ಲಿ ಪರ್ವತ ಮಾರ್ಗಗಳು ಮುಚ್ಚಲ್ಪಡುತ್ತವೆ. ಆದರಿಂದ ಪಡೆಗಳ ಜಾಗರೂಕತೆಯಿಂದ ಇರಬೇಕು ಎಂದು ಎಂದು ಹಿರಿಯ ಭದ್ರತಾ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಇದೇ ವರ್ಷದ ಸೆಪ್ಟೆಂಬರ್ನಲ್ಲಿ ಕುಪ್ವಾರಾ ಜಿಲ್ಲೆಯ ಕೇರನ್ ಸೆಕ್ಟರ್ನ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿತ್ತು.
ಕಳೆದ ವಾರ, ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ಪ್ರದೇಶದಲ್ಲಿ ಶಂಕಿತ ವ್ಯಕ್ತಿಗಳ ಚಲನವಲನಗಳ ಬಗ್ಗೆ ಮಾಹಿತಿ ಪಡೆದ ನಂತರ, ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಈ ವೇಳೆ ಭಯೋತ್ಪಾದಕರು ಸೇನೆಯ ಮೇಲೆ ಗುಂಡು ಹಾರಿಸಿದ ನಂತರ ಗುಂಡಿನ ಚಕಮಕಿ ನಡೆಸಲಾಯಿತು ಎಂದು ವರದಿ ಬಂದಿತ್ತು. (ಏಜೆನ್ಸೀಸ್)