ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಸಾವಿಗೀಡಾದ ಯೋಧ; ಕರ್ತವ್ಯದಲ್ಲಿದ್ದಾಗಲೇ ಮರಣ

Soldier
Published on

ಬೀದರ್: ಭಾರತೀಯ ಸೇನೆಯಲ್ಲಿ ಕರ್ತವ್ಯನಿರತ ಯೋಧರೊಬ್ಬರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಗುರೇಜ್​ನಲ್ಲಿ ಈ ಸಾವು ಸಂಭವಿಸಿದೆ.

ಮೂಲತಃ ಬೀದರ್​ನವರಾದ ರಾಮದಾಸ್ ಚಂದಾಪುರೆ ಮೃತಪಟ್ಟ ಯೋಧ. ಕಮಲನಗರದ ತಾಲೂಕಿನ ಬೇಡಕುಂದಾ ಗ್ರಾಮದ ಇವರು 15 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆಯಲ್ಲಿದ್ದರು. ಇವರು ಆಮ್ಲಜನಕದ ಕೊರತೆಯಿಂದಾಗಿ ಸಾವಿಗೀಡಾಗಿದ್ದಾರೆ.

ಇವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಿನಲ್ಲೇ ನಡೆಸಲಾಗಿದೆ. ಮುಗಿಲು ಮುಟ್ಟಿದ ಜಯಘೋಷಣೆಗಳೊಂದಿಗೆ ಅಂತಿಮಸಂಸ್ಕಾರ ನೆರವೇರಿತು. ಕ್ಷೇತ್ರದ ಶಾಸಕ, ಸಚಿವ ಪ್ರಭು ಚವಾಣ್​ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net