ತಾಂತ್ರಿಕ ದೋಷ; ಬೆಂಗಳೂರಿನಿಂದ ಹೊರಟಿದ್ದ ಇಂಡಿಗೋ ವಿಮಾನ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ!

IndiGo
Published on

ನವದೆಹಲಿ: ಬೆಂಗಳೂರಿನಿಂದ ವಾರಣಾಸಿಗೆ ಮಂಗಳವಾರ ಬೆಳಗ್ಗೆ ಹೊರಟಿದ್ದ ಇಂಡಿಗೋ ವಿಮಾನ ತಾಂತ್ರಿಕ ದೋಷದಿಂದಾಗಿ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿರುವ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಆರ್‌ಜಿಐಎ) ತುರ್ತು ಭೂಸ್ಪರ್ಶ ಮಾಡಿದೆ.

ಇಂಡಿಗೋ ಫ್ಲೈಟ್ 6E897 ಬೆಂಗಳೂರಿನಿಂದ ವಾರಣಾಸಿಗೆ ಹೊರಟಿತ್ತು. ಆದರೆ, ಶಂಶದಾಬಾದ್ ವಿಮಾನ ನಿಲ್ದಾಣಕ್ಕೆ ತಿರುಗಿಸಿದ ನಂತರ 6:15 ಕ್ಕೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ದೃಢಪಡಿಸಿದೆ.

137 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ (6E897) ತಾಂತ್ರಿಕ ಸಮಸ್ಯೆಯಿಂದ ಬೆಳಗ್ಗೆ 6:15ಕ್ಕೆ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಘಟನೆಯ ಕುರಿತು ತನಿಖೆಗೆ ಡಿಜಿಸಿಎ ಆದೇಶಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net