

ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನ ಒಂದನ್ನ ನಿಲ್ದಾಣದ ರನ್ವೇನಿಂದ ವಾಪಸ್ ಕರೆಸಲಾಗಿದೆ. ಮಧ್ಯಾಹ್ನ 1 ಗಂಟೆಯ ಮೊದಲು ಇಂಡಿಗೋ ವಿಮಾನ ಕೊಚ್ಚಿಯಿಂದ ಬೆಂಗಳುರಿಗೆ ಹೊರಟಿತ್ತು. ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ನಿಲ್ದಾಣದ ರನ್ವೇನಿಂದ ವಾಪಸ್ ಕರೆಸಲಾಗಿದೆ.
ಪ್ರಯಾಣಿಕರು ವಿಮಾನದೊಳಗೆ ಕುಳಿತಿದ್ದರು, ಅವರನ್ನು ವಿಮಾನದಿಂದ ಇಳಿಸಿ, ಅವರ ಲಗೇಜ್ಗಳನ್ನು ಗೆಳಗಿಳಿಸಿ ಸಂಪೂರ್ಣ ತಪಾಸಣೆ ನಡೆಸಿ ಸಂಪೂರ್ಣ ಹುಡುಕಾಟ ನಡೆಸಿದಾಗ ಸುಳ್ಳು ಎಂಬುದು ತಿಳಿದುಬಂದಿದೆ.
ಕೊಚ್ಚಿಯಿಂದ ಬೆಂಗಳೂರಿಗೆ ಹೊರಟಿದ್ದಾಗ ಬಾಂಬ್ ಬೆದರಿಕೆ ಬಂದಿತ್ತು. ಬೆದರಿಕೆ ಕರೆ ಬಂದ ಕೂಡಲೇ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು.
ಬಾಂಬ್ ಬೆದರಿಕೆ ಬಂದಿತ್ತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸೋಮವಾರ ಬೆಂಗಳೂರಿಗೆ ಹೋಗುವ ಇಂಡಿಗೋ ವಿಮಾನಕ್ಕೆ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಪಿಟಿಐಗೆ ತಿಳಿಸಿವೆ.
6E6482 ವಿಮಾನವು ಬೆಳಗ್ಗೆ 10.30ಕ್ಕೆ ಬೆಂಗಳೂರಿಗೆ ಹೊರಡಬೇಕಿತ್ತು, ಮಾನವನ್ನು ತಪಾಸಣೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.