ಬಾಳೆಹೊನ್ನೂರಲ್ಲಿ ಇಂದ್ರಧನುಷ್ ಅಭಿಯಾನಕ್ಕೆ ಚಾಲನೆ

07bhr 1
ಸೀಗೋಡು ಅಂಗನವಾಡಿ ಕೇಂದ್ರದಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ಇಂದ್ರ ಧನುಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಭಗವಾನ್, ಸುರೇಂದ್ರ, ಸುಮತಿ, ಲೀನಾ ಜ್ಯೋತಿ, ರೋಹಿಣಿ ಇದ್ದರು.
Published on

ಬಾಳೆಹೊನ್ನೂರು: ಸೀಗೋಡು ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಆರೋಗ್ಯ ಇಲಾಖೆ ಹಾಗೂ ರೋಟರಿ ಕ್ಲಬ್ ಸಹಯೋಗದಲ್ಲಿ ಇಂದ್ರಧನುಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹಿರಿಯ ಆರೋಗ್ಯ ನಿರೀಕ್ಷಕ ಭಗವಾನ್ ಮಾತನಾಡಿ, ಆರೋಗ್ಯ ಇಲಾಖೆಯಿಂದ ಆ.7ರಿಂದ 12ರವರೆಗೆ ಇಂದ್ರಧನುಷ್ ಅಭಿಯಾನ ನಡೆಸುತ್ತಿದ್ದು, ಮಕ್ಕಳಿಗೆ ಕಾಲ ಕಾಲಕ್ಕೆ ಯಾವ ಚುಚ್ಚುಮದ್ದು ತೆಗೆದುಕೊಳ್ಳಬೇಕು ಎಂದು ಪಾಲಕರಲ್ಲಿ ಅರಿವು ಮೂಡಿಸುವುದೇ ಈ ಅಭಿಯಾನದ ಉದ್ದೇಶ ಎಂದರು.
ಸರಿಯಾದ ಸಮಯಕ್ಕೆ ಚುಚ್ಚುಮದ್ದುಗಳನ್ನು ಪಡೆದು ಕೊಂಡಲ್ಲಿ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ. ಚುಚ್ಚುಮದ್ದುಗಳನ್ನು ಕಾಲಕ್ಕೆ ಸರಿಯಾಗಿ ಪಡೆದುಕೊಳ್ಳಲು ಆಶಾ ಕಾರ್ಯಕರ್ತಯರು ಸಹಕರಿಸಬೇಕು. ಆರೋಗ್ಯ ಇಲಾಖೆಯಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.
ರೋಟರಿ ಅಧ್ಯಕ್ಷ ಎ.ಆರ್.ಸುರೇಂದ್ರ, ಸದಸ್ಯರಾದ ಎ.ಸಿ.ಸಂದೇಶ್, ಸುಧಾಕರ್, ಮಹಿಳಾ ಆರೋಗ್ಯ ಸಹಾಯಕಿ ಸುಮತಿ, ಆಶಾ ಕಾರ್ಯಕರ್ತೆ ಲೀನಾ ಜ್ಯೋತಿ, ಗೀತಾ, ಅಂಗನವಾಡಿ ಮೇಲ್ವಿಚಾರಕಿ ರೋಹಿಣಿ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net