

ನವದೆಹಲಿ: ಭಾರತೀಯ ವಾಯುಪಡೆಗೆ ಸ್ವದೇಶೀಯವಾಗಿ ಅಭಿವೃದ್ಧಿಪಡಿಸಲಾದ ಲಘು ಯುದ್ಧ ಹೆಲಿಕಾಪ್ಟರ್ಗಳ (ಎಲ್ಸಿಎಚ್) ಮೊದಲ ಬ್ಯಾಚ್ ಸೋಮವಾರ ಸೇರ್ಪಡೆ ಮಾಡಲಾಗುತ್ತಿದೆ. ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಟ್ (ಎಚ್ಎಎಲ್) ದೇಶೀಯವಾಗಿ ಅಭಿವೃದ್ಧಿ ಪಡಿಸಿರುವ ಈ ಹೆಲಿಕಾಪ್ಟರ್ ಅನ್ನು ಅತಿ ಎತ್ತರದ ಪ್ರದೇಶಗಳಲ್ಲಿ ಹಾರಾಟ ನಡಸಲು ಸಾಧ್ಯವಾಗುವಂತೆ ನಿಯೋಜಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್ ಚೌಧರಿ ಉಪಸ್ಥಿತಿಯಲ್ಲಿ ರಾಜಸ್ಥಾನದ ಜೋಧ್ಪುರದಲ್ಲಿ ನಡೆಯುವ ಸಮಾರಂಭದಲ್ಲಿ ಐಎಎಫ್ಗೆ ಹಸ್ತಾಂತರಿಸ ಲಾಗುವುದು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಅತಿ ಎತ್ತರದಲ್ಲಿ ನಿರ್ವಿುಸಲಾದ ಬಂಕರ್ಗಳ ಧ್ವಂಸ ಕಾರ್ಯಾ ಚರಣೆ, ಕಾಡು ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಬಂಡುಕೋರ ನಿಗ್ರಹ ಕಾರ್ಯಾಚರಣೆಗೆ ಇದನ್ನು ಬಳಸಬಹುದಾಗಿದೆ.