

ಬೆಂಗಳೂರು: ಹದಿರನಾರನೇ ವಿಧಾನಸಭೆಗೆ ಆಯ್ಕೆಯಾಗಿರುವ ಸದಸ್ಯರು 2024-25ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಆಸ್ತಿ ಮತ್ತು ದಾಯಿತ್ವ(Information for submitting asset and liability list to MLAs)ಗಳ ಪಟ್ಟಿಯನ್ನು ಜೂ.30ರ ಒಳಗೆ ಲೋಕಾಯುಕ್ತರಿಗೆ ಸಲ್ಲಿಸುವಂತೆ ವಿಧಾನಸಭೆ ಕಾರ್ಯದರ್ಶಿ ತಿಳಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984 ಕಲಂ 7ರ ಉಪ ಕಲಂ(1)ರಡಿ ಉಲ್ಲೇಖಿಸಿರುವಂತೆ ಪ್ರತಿಯೊಬ್ಬ ವಿಧಾನಸಭೆ ಸದಸ್ಯರು ಆಯಾ ವರ್ಷ ಜೂನ್ 30ರ ಒಳಗೆ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವ ಪಟ್ಟಿಯನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂದು ಅಧ್ಯಾದೇಶಿಸಲಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ (M K Vishalakshi) ಸದಸ್ಯರಿಗೆ ಈ ಮಾಹಿತಿ ನೀಡಿದ್ದಾರೆ.