ದೇಶದಲ್ಲಿ ಮತ್ತೊಮ್ಮೆ ಪುಲ್ವಾಮಾ ದಾಳಿ ನಡೆಯಲಿದೆ; ಬೆದರಿಕೆ ಹಾಕಿದ ವಿದ್ಯಾರ್ಥಿ ಅರೆಸ್ಟ್

UP Madarasa
Published on

ಲಖನೌ: 2019ರ ಫೆಬ್ರವರಿ ತಿಂಗಳಲ್ಲಿ ಉಗ್ರರು ಭಾರತೀಯ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದರು. ಈ ಕಹಿ ಘಟನೆ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಮತ್ತೊಂದು ದಾಳಿ ಮಾಡುವುದಾಗಿ ಬೆದರಿಕೆ ಹಾಕಿ ವಿದ್ಯಾರ್ಥಿಯೋರ್ವ ಪೊಲೀಸರ ಅತಿಥಿಯಾಗಿರುವ ಘಟನೆ ಉತ್ತರಪ್ರದೇಶದ ಸಹರಾನ್​ಪುರದಲ್ಲಿ ನಡೆದಿದೆ.

ದಾರುಲ್ ಉಲೂಮ್ ದಿಯೋಬಂದ್‌ನ ವಿದ್ಯಾರ್ಥಿ ಮೊಹಮ್ಮದ್ ತಲ್ಹಾ ಮಝರ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಜಾರ್ಖಂಡ್‌ನ ಜೆಮ್‌ಶೆಡ್‌ಪುರದ ಸೆರೈಕೆಲಾ ನಿವಾಸಿ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

UP Madarasa

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದ ಆರೋಪಿ ಬಹುತ್ ಜಲ್ದಿ ಇನ್‌ಶಾ ಅಲ್ಲಾ ದುಸ್ರಾ ಪುಲ್ವಾಮಾ ಭೀ ಹೋಗಾ ಎಂದು ಬೆದರಿಕೆ ಹಾಕಿದ್ದ. ಅಂದರೆ ಆದಷ್ಟು ಬೇಗ ಇನ್ನೊಂದು ಪುಲ್ವಾಮ ದಾಳಿ ಆಗಲಿದೆ ಎಂದು ಬೆದರಿಕೆ ಹಾಕಿದ್ದ. ಈ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಪ್ರತಿಕ್ತಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸರು ಹಾಗೂ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಬಂಧಿತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅರೋಪಿಯ ಮೊಬೈಲ್​ಅನ್ನು ವಶಕ್ಕೆ ಪಡೆಯಲಾಗಿದ್ದು, ಈತನ ಹಿನ್ನಲೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net