ಇನ್​ಸ್ಟಾಗ್ರಾಂ ಗೆಳೆಯನಿಂದ ವಿವಾಹಿತೆ ಮೇಲೆ ಲೈಂಗಿಕ ದೌರ್ಜನ್ಯ!

Crime symbolic photo
Published on

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಇನ್​ಸ್ಟಾಗ್ರಾಂ ನಲ್ಲಿ ಪರಿಚಯವಾದ 32 ವರ್ಷದ ಮಹಿಳೆಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ.

ಆರೋಪ ವಿವಿಧ ವೈಯಕ್ತಿಕ ಕಾರಣಗಳನ್ನು ನೀಡಿ ಮಹಿಳೆಯಿಂದ 5 ಲಕ್ಷಕ್ಕೂ ಹೆಚ್ಚು ಹಣ ಚಿನ್ನಾಭರಣವನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಇನ್​ಸ್ಟಾಗ್ರಾಮ್ ಮೂಲಕ ಈ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದಾಳೆ ಎನ್ನಲಾಗಿದೆ.

ನಡೆದದ್ದೇನು?

ಆರೋಪಿಯು ಮಹಿಳೆಗೆ ಆಕೆಯ ನಗ್ನ ಫೋಟೋಗಳನ್ನು ಗಂಡ ಹಾಗೂ ಆಕೆಯ ಕುಟುಂಬ ಸದಸ್ಯರಿಗೆ ಕಳುಹಿಸುತ್ತೇನೆ ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ. ಇದರಿಂದಾಗಿ ನೊಂದ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಮಹಿಳೆಯು ಮೇ 2021 ರಿಂದ ಮಾರ್ಚ್ 2023 ರ ನಡುವೆ ಈ ಪುರುಷನೊಂದಿಗೆ ಸಂಪರ್ಕದಲ್ಲಿದ್ದಳು. ಆರೋಪಿಯು ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ನಿವಾಸಿ ಎಂದು ವರದಿಯಾಗಿದೆ. ಸಂತ್ರಸ್ತೆ ಪ್ರತಿದಿನ ಈತನೊಂದಿಗೆ ಮಾತನಾಡಲು ಪ್ರಾರಂಭಿಸಿದಳು. ಅವರು ವೈಯಕ್ತಿಕವಾಗಿ ಕೂಡ ಭೇಟಿಯಾದರು.

ಇನ್​ಸ್ಟಾಗ್ರಾಂ ಗೆಳೆಯನ ಸುಳ್ಳು ಭರವಸೆ!

ಪುರುಷನು ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದನು. ಶಂಕಿತ ಆರೋಪಿಯು ವಿವಿಧ ನೆಪದಲ್ಲಿ ಒಟ್ಟು 5.25 ಲಕ್ಷ ರೂಪಾಯಿ ಮತ್ತು 50 ಗ್ರಾಂ ಚಿನ್ನಾಭರಣಗಳನ್ನು ತೆಗೆದುಕೊಂಡಿದ್ದಾನೆ ಎಂದು ದೂರುದಾರರು ತಮ್ಮ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ. ಅದಲ್ಲದೇ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದು ಮಹಿಳೆಯ ನಗ್ನ ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

ಮಹಿಳೆಯ ನಗ್ನ ಚಿತ್ರಗಳನ್ನು ಆಕೆಯ ಪತಿಗೆ ಕಳುಹಿಸುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಇನ್​ಸ್ಟಾಗ್ರಾಂ ಗೆಳೆಯ ತನಗೆ ಫೋನ್ ಮತ್ತು ಆನ್‌ಲೈನ್‌ನಲ್ಲಿ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net