ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ, ಗುಳಿಗ ದೈವಗಳ ಪ್ರತಿಷ್ಠಾಪನೆ

Published on

ಸುಳ್ಯ: ಬೂಡು ಪರಿಸರದ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನ್ನಿಧ್ಯ ಗುಳಿಗ ದೈವಗಳ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ ನಡೆಯಿತು.

ಬಿಜಿಪಿ ಮಾಜಿ ರಾಜ್ಯಾಧ್ಯಕ್ಷ ಮಾತನಾಡಿದರು. ನಪಂ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಅಧ್ಯಕ್ಷತೆ ವಹಿಸಿದ್ದರು. ಕೆ.ವಿ.ಜಿ. ಸಮೂಹ ವಿದ್ಯಾಸಂಸ್ಥೆಗಳ ಕಮಿಟಿ ಬಿ. ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಊರುಬೈಲ್, ಅರಂತೋಡು ತೊಡಿಕಾನ ಪ್ರಾ.ಕೃ. ಪ.ಸ. ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ನ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್, ಉದ್ಯಮಿ ಹೇಮಂತ್ ಕಾಮತ್, ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್, ಅಧ್ಯಕ್ಷ ನಾರಾಯಣ ಕೇಕಡ್ಕ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನೀಲ್ ಕೇರ್ಪಳ, ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯ ಲಿಂಗಪ್ಪ ಗೌಡ, ದೈವದ ಹಿರಿಯ ಪೂಜಾರಿ ಮಿತ್ತೂರು ರವಿರಾಮ ರೈ, ಕುಕ್ಕನ್ನೂರು ಕಿನ್ನಿಮಾಣಿ-ಪೂಮಾಣಿ ದೈವಸ್ಥಾನದ ಪ್ರಧಾನ ಅರ್ಚಕ ಸುಭಾಷ್ ರೈ, ನಿವೃತ್ತ ಶಿಕ್ಷಕಿ ಮೀನಾಕ್ಷಿ ಆನಂದ ಗೌಡ, ಹಿರಿಯರಾದ ಮಾಧವ ಬೂಡು, ಕುಂಞ ಮೇಸ್ತ್ರಿ, ಸಿಎ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಶೀನಪ್ಪ ಬಯಂಬು, ಆದಿ ದ್ರಾವಿಡ ಯುವ ವೇದಿಕೆ ಅಧ್ಯಕ್ಷ ಮೋನಪ್ಪ ಮಡಿವಾಳಮೂಲೆ, ಅಂಗನವಾಡಿ ಕಾರ್ಯಕರ್ತೆ ಕವಿತಾ ಬೂಡು, ದೈವಸ್ಥಾನದ ಆಡಳಿತ ಮೊಕ್ತೇಸರ ಮಾಯಿಲ ಬೂಡು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಬೂಡು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬೂಡು ಮತ್ತಿತರರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವಕ್ಕೆ ನೇತೃತ್ವ ವಹಿಸಿದ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನೀಲ್ ಕೇರ್ಪಳ, ಮೀನಾಕ್ಷಿ ಆನಂದ ಗೌಡ, ನ.ಪಂ. ಸದಸ್ಯ ರಿಯಾಝ್ ಕಟ್ಟೆಕ್ಕಾರ್ಸ್ ಅವರನ್ನು ಸನ್ಮಾನಿಸಲಾಯಿತು.

ಕವಿತಾ ಬೂಡು ಸ್ವಾಗತಿಸಿದರು. ವಾಸುದೇವ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net