ಬೆಳೆ ವಿಮೆ ಹಣ ರೈತರಿಗೆ ಶೀಘ್ರ ಬಿಡುಗಡೆ ಮಾಡಲು ವಿಮೆ ಕಂಪನಿಗಳಿಗೆ ಸೂಚಿಸಿ; ರಾಜ್ಯದ ಒತ್ತಾಯ

chaluvarayaswamy
Published on

ಬೆಂಗಳೂರು: ರೈತರ ಬೆಳೆ ವಿಮೆ ಹಣ ಬಿಡುಗಡೆ ಮಾಡಲು ವಿಮಾ ಕಂಪನಿಗಳು ತಡ ಮಾಡುತ್ತಿರುವ ಹಿನ್ನಲೆ ರೈತರು ಸಂಕಷ್ಟಕ್ಕೆ ಸಿಲುಕಿದ್ದು ವಿಮಾ ಕಂಪನಿಗಳಿಗೆ ಶೀಘ್ರವಾಗಿ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಒತ್ತಾಯ ಮಾಡಿದರು.

ಕೃಷಿ ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಹಣಕಾಸು ಸಚಿವೆ, ವಿಮಾ ಕಂಪನಿಗಳಿಗೆ ರೈತರ ಬೆಳೆ ವಿಮೆ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಸೂಚನೆ ನೀಡುವುದಾಗಿ ತಿಳಿಸಿದರು.

ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಎನ್ .ಚಲುವರಾಯಸ್ವಾಮಿ ಅವರು 2023 ರನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿರುವ ಹಿನ್ನಲೆ ರೈತರ ಬೆಳೆದ ಸಿರಿಧಾನ್ಯಗಳಿಗೆ ಬೆಂಬಲ ಬೆಲೆ ಕೊಟ್ಟು ಖರೀದಿ ಮಾಡುವುದರ ಮೂಲಕ ರೈತರಿಗೆ ಸಿರಿಧಾನ್ಯ ಬೆಳೆ ಬೆಳೆಯಲು ಉತ್ತೇಜನ ನೀಡಿದಂತಾಗುತ್ತದೆ ಹಾಗೂ ಬೆಳೆ ಬೆಳೆಯುವ ವಿಸ್ತೀರ್ಣ ಸಹ ಹೆಚ್ಚಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದರು. ನಿರ್ಮಲಾ ಸೀತಾರಾಮನ್ ಅವರು ಸಕಾರಾತ್ಮಕ ಸ್ಪಂದನೆ ನೀಡಿ ಬೆಂಬಲ ಬೆಲೆ ನಿಗದಿ ಮಾಡುವ ಬಗ್ಗೆಯೂ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net