ಶಾಲಾ ಮಕ್ಕಳಿಗೆ ರಾಷ್ಟ್ರೀಯ ಹಬ್ಬ, ನಾಡಹಬ್ಬಗಳಂದೂ ಬಿಸಿಯೂಟ ವಿತರಣೆಗೆ ಸೂಚನೆ

middaymeal
Published on

ಬೆಂಗಳೂರು ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಬಿಸಿಯೂಟ ಒದಗಿಸುವಂತೆ ಪಿಎಂ ಪೋಷಣ್ ನಿರ್ದೇಶಕರು ಎಲ್ಲ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರತಿ ವರ್ಷದಂತೆ ಪಿಎಂ ಪೋಷಣ್ (ಮಧ್ಯಾಹ್ನದ ಬಿಸಿಯೂಟ ಯೋಜನೆ) ವಾರ್ಷಿಕ ಕ್ರಿಯಾ ಯೋಜನೆ ಅಡಿಯಲ್ಲಿ ಪ್ರತಿ ಶೈಕ್ಷಣಿಕ ವರ್ಷದ ಕೆಲಸದ ದಿನಗಳನ್ನು ಲೆಕ್ಕಸುವ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳನ್ನು (ಕನ್ನಡ ರಾಜ್ಯೋತ್ಸವ) ಶಾಲಾ ಕೆಲಸದ ದಿನಗಳೆಂದು ಪರಿಗಣಿಸಲಾಗಿರುತ್ತದೆ. ಪಿಎಂ ಪೋಷಣ್ ಯೋಜನೆ ಅಡಿಯಲ್ಲಿ ಬಿಸಿಯೂಟ ಯೋಜನೆಯನ್ನು ಅನುಷ್ಠಾನ ಮಾಡಲು ಅನುಮೋದನೆ ನೀಡಲಾಗಿದೆ.

ಹಾಗೆಯೇ ಜ.26ರ ಗಣರಾಜ್ಯೋತ್ಸವದಂದು ಎಲ್ಲ ಶಾಲೆಗಳಲ್ಲಿ ಕಾರ್ಯಕ್ರಮ ಅನುಷ್ಠಾನ ಮಾಡಲು ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net