ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

meeting cm lakhsmi
Published on

ಬೆಂಗಳೂರು: ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯೋಜನೆಯ ಕುರಿತು ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ತೆರಿಗೆ ಪಾವತಿಸುವವರು ಹಾಗೂ ಜಿಎಸ್​​ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಆನ್​ಲೈನ್, ಆಫ್​​ಲೈನ್​​ನಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಗ್ರಾಮೀಣ ಭಾಗದಲ್ಲಿರುವವರು ನಾಡ ಕಚೇರಿಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಗೃಹಜ್ಯೋತಿ ಯೋಜನೆಯನ್ನು ಪಡೆಯಲು ಗ್ರಾಹಕರು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಇದರ ಲಿಂಕ್​ ವೆಬ್​ಸೈಟ್​​ನಲ್ಲಿ ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net