ಕನ್ವರ್ ಯಾತ್ರೆಯ ಬಗ್ಗೆ ಅಪಮಾನ; ದುಷ್ಕರ್ಮಿಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ| adityanath

yogi
Published on

ವಿಧ್ವಂಸಕ ಕೃತ್ಯಗಳಲ್ಲಿ ತೊಡಗುವ ಮೂಲಕ ಯಾತ್ರೆಯ ಹೆಸರು ಕೆಡಿಸಲು ಪ್ರಯತ್ನಿಸುತ್ತಿರುವವರ ಸಿಸಿಟಿವಿ ದೃಶ್ಯಾವಳಿಗಳು ನಮ್ಮ ಬಳಿ ಇವೆ. ಕನ್ವರ್ ಯಾತ್ರೆ ಶಾಂತಿಯುತವಾಗಿ ಮುಗಿದ ನಂತರ ನಾವು ಈ ದುಷ್ಕರ್ಮಿಗಳ ಪೋಸ್ಟರ್‌ಗಳನ್ನು ಹಾಕುತ್ತೇವೆ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಉತ್ತರ ಪ್ರದೇಶ; ವಾರ್ಷಿಕ ಕನ್ವರ್ ಯಾತ್ರೆಯ ಅಪಖ್ಯಾತಿಗೆ ಯತ್ನಿಸುವವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು 'ಕನ್ವಾರಿಯಾ'ಗಳು ವಾಹನಗಳಿಗೆ ಹಾನಿ ಮಾಡುವುದು, ವ್ಯಕ್ತಿಗಳ ಮೇಲೆ ದಾಳಿ ಮಾಡುವುದು ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿರುವ ಘಟನೆಗಳು ಹರಿದಾಡುತ್ತಿರುವ ನಡುವೆಯೇ ಸಿಎಂ ಯೋಗಿ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.

ಸಮಾರಂಭವೊಂದರಲ್ಲಿ ಮಾತನಾಡಿದ ಸಿಎಂ ಯೋಗಿ, ಎಲ್ಲಿ ಉತ್ಸಾಹವಿದೆಯೋ ಎಲ್ಲಿ ನಂಬಿಕೆ ಮತ್ತು ಭಕ್ತಿ ಇರುತ್ತದೆಯೋ, ಅಲ್ಲಿ ಕೆಲವು ಅಂಶಗಳು ಉತ್ಸಾಹವನ್ನು ಭಂಗಗೊಳಿಸಲು ಈ ಭಕ್ತಿ ಮತ್ತು ನಂಬಿಕೆಯನ್ನು ಕೆಣಕಲು ನಿರಂತರವಾಗಿ ಪ್ರಯತ್ನಿಸುತ್ತಿರುತ್ತವೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಪ್ರತಿಯೊಂದು 'ಕನ್ವರ್ ಸಂಘ'ವೂ ದುಷ್ಕೃತ್ಯಗಳನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಕೆಲವು ಸುಳ್ಳು ಅಂಶಗಳನ್ನು ಬಳಸಿಕೊಂಡು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಧಾರ್ಮಿಕ ಯಾತ್ರೆಯನ್ನು ಅಪಖ್ಯಾತಿಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. ಪ್ರತಿಯೊಬ್ಬ ಕನ್ವರ್ ಸಂಘ ಮತ್ತು ಭಕ್ತರು ಯಾತ್ರೆಯ ಪಾವಿತ್ರ್ಯದ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net