ಸಿಎಂಗೆ ಅವಹೇಳನ, ಉಪನ್ಯಾಸಕ ಅಮಾನತು

B S Yeddyurappa
Published on

ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕ್ಲಿಪ್ಪಿಂಗ್ ಪೋಸ್ಟ್ ಮಾಡಿದ ಆರೋಪದ ಮೇಲೆ ಉಪನ್ಯಾಸಕರೊಬ್ಬರನ್ನು ಅಮಾನತು ಮಾಡಿ ಪದವಿಪೂರ್ವ ಶಿಕ್ಷಣ ಇಲಾಖೆ ಶಿಸ್ತು ಪ್ರಾಧಿಕಾರ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಎಸ್. ಮಂಜುನಾಥ್ ಅಮಾನತುಗೊಂಡವರು. ಹಲೋ ಸಿಎಂ ಸಾಹೇಬ್ರೆ ಫ್ರೀ ಇದ್ದೀರಾ..! ಕರೊನಾ ಪರಿಹಾರಕ್ಕೆ ಜನರ ಹತ್ತಿರ ದುಡ್ಡು ಕೇಳ್ತಿದ್ದೀರಿ. ದುಡ್ಡು ಎಲ್ಲಿದೆ ಅಂತ ಲಿಸ್ಟ್ ಇಲ್ಲಿದೆ ನೋಡಿ.. ಎಂದು ಪೋಸ್ಟ್ ಮಾಡಿದ್ದ ಆಡಿಯೋ ಕ್ಲಿಪ್ ಎಲ್ಲೆಡೆ ವೈರಲ್ ಆಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net