

Patna: ಆರ್ಜೆಡಿ ಮತ್ತು ಕಾಂಗ್ರೆಸ್ ಜಂಟಿ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಗೆ ನೀಡಿದ ಕಾಂಗ್ರೆಸ್ ಬೆಂಬಲಿಗರ ವಿರುದ್ಧ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ (ಆಗಸ್ಟ್ 28) ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ಮಾಡಿದ್ದಾರೆ.
ಸುದ್ದಿಮೂಲಗಳ ಪ್ರಕಾರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ, ಕಚೇರಿಯ ಗೇಟ್ ಮುರಿದು ಅಲ್ಲಿರುವ ಜನರಿಗೆ ಕೋಲುಗಳಿಂದ ಹಲ್ಲೆ ನಡೆಸಿದ್ದಾರೆ. ಇನ್ನು ಇಟ್ಟಿಗೆ ಕಲ್ಲುಗಳಿಂದ ಅಲ್ಲಿದ್ದ ವಾಹನಗಳಿಗೆ ತೂರಿದ್ದು, ಈ ಸಂದರ್ಭದಲ್ಲಿ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಈ ವೇಳೆ ಬಿಜೆಪಿ ನಾಯಕರು ಸದಾಕತ್ ಆಶ್ರಮಕ್ಕೆ ಮೆರವಣಿಗೆ ನಡೆಸಿ ರಾಹುಲ್ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ವೇಳೆ ಬಿಹಾರ್ ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆಯನ್ನು ನಿಯಂತ್ರಿಸಲು ಪ್ರಯತ್ನಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಸ್ಥಳದಿಂದ ಹೊರಹಾಕುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸಿದ್ದಾರೆ.
ಬಿಹಾರದ ದರ್ಭಾಂಗದಲ್ಲಿ ನಡೆದ ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಉಪಸ್ಥಿತಿಯಲ್ಲಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ದಿವಂಗತ ತಾಯಿಯ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದು ಈ ಗೊಂದಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಹಾಗೂ ಆರ್ಜೆಡಿ ವೇದಿಕೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿಯ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸಿದ ಆರೋಪಿಯನ್ನು ಬಿಹಾರ ಪೊಲೀಸರು ಇಂದು ಬಂಧಿಸಿದ್ದಾರೆ. ಈತ ದರ್ಭಾಂಗ ನಿವಾಸಿ ರಿಜ್ವಿ ಎಂದು ಗುರುತಿಸಲಾಗಿದೆ. (ಏಜೆನ್ಸೀಸ್)