ಶಿಕ್ಷಣದಿಂದ ಸಮಗ್ರ ಅಭಿವೃದ್ಧಿ

teacher sendoff
ಹೊಳೆಹೊನ್ನೂರು ಸಮೀಪದ ಹನುಮಂತಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮಾಲತಿ ಪಾಟೀಲ್ ಅವರನ್ನು ಸನ್ಮಾನಿಸಲಾಯಿತು. ಮಂಜುನಾಥ್, ನಾಗರತ್ನಾ, ಕೃಷ್ಣಮೂರ್ತಿ, ವಿನಯ್ ಕುಮಾರ್ ಇತರರಿದ್ದರು.
Published on

ಹೊಳೆಹೊನ್ನೂರು: ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಹಿರಿದು ಎಂದು ನಿವೃತ್ತ ಶಿಕ್ಷಕಿ ಮಾಲತಿ ಪಾಟೀಲ್ ಹೇಳಿದರು.
ಸಮೀಪದ ಹನುಮಂತಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ. ಶಿಕ್ಷಕಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಸಾರ್ಥಕತೆ ಹೊಂದಿದ್ದೇನೆ. ಸರ್ಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಕಾರ ಮುಖ್ಯ ಎಂದರು. ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷೆ ನಾಗರತ್ನಾ, ಮುಖ್ಯಶಿಕ್ಷಕ ಕೃಷ್ಣಮೂರ್ತಿ, ಪಿಡಿಒ ವಿನಯ್ ಕುಮಾರ್, ಪಿ.ರುದ್ರೇಶನ್, ಪುಟ್ಟರಾಜ, ಡಾ. ಅನಿಲ್‌ಕುಮಾರ್, ಸುರೇಶ್‌ರಾವ್, ನಾಗರಾಜ್ ಮೊರೆ, ಲೋಕೇಶ್‌ರಾವ್, ವೆಂಕಟೇಶ್, ಗೀತಾ, ಪಲ್ಲವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net