ಗುಪ್ತಚರ ಇಲಾಖೆ ನಿಂಬಾಳ್ಕರ್ ಹೆಗಲಿಗೆ

Nimbalkar vvani
Published on

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಗುಪ್ತಚರ ಇಲಾಖೆ ಮುಖ್ಯಸ್ಥ ಎಡಿಜಿಪಿ ಕೆ.ವಿ.ಶರತ್‌ಚಂದ್ರ ಅವರನ್ನು ಎತ್ತಂಗಡಿ ಮಾಡಲಾಗಿದೆ. ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಹೆಗಲಿಗೆ ಗುಪ್ತಚರ ಇಲಾಖೆ ಜವಾಬ್ದಾರಿ ವಹಿಸಲಾಗಿದೆ.

ಕೆ.ವಿ.ಶರತ್‌ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದ್ದು, ರಾಜ್ಯ ರಸ್ತೆ ಮತ್ತು ಸುರಕ್ಷತ ವಿಭಾಗವನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.

ಹೇಮಂತ್ ನಿಂಬಾಳ್ಕರ್ ಅವರಿಗೆ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಹೆಚ್ಚುವರಿ ಜವಾಬ್ದಾರಿಯಾಗಿ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net