ರಾಜ್ಯದಲ್ಲಿ ಮುಂದುವರಿದ ಹಿಂಗಾರು ಅಬ್ಬರ : ಅ.22ರವರೆಗೆ ವರ್ಷಧಾರೆ- Rain Expected Until October 22

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ,ಕೊಡಗು, ಮೈಸೂರು, ಚಾಮರಾಜನಗರ, ಕೋಲಾರದಲ್ಲಿ ಅ.18ರಂದು ಗುಡುಗು ಸಹಿತ ಜೋರು ಮಳೆಯಾಗುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ಕೊಡಲಾಗಿದೆ. ಗಂಟೆಗೆ 60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಕೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ರಾಜ್ಯದಲ್ಲಿ ಮುಂದುವರಿದ ಹಿಂಗಾರು
ಮುಂದಿನ 5 ದಿನ ವರ್ಷಧಾರೆ
Published on: 

ಬೆಂಗಳೂರು: ಈಶಾನ್ಯ ಮಾನ್ಸೂನ್ ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಶನಿವಾರವೂ ಮುಂದುವರಿದಿದೆ. ದಕ್ಷಿಣ ಕರ್ನಾಟಕ ಮತ್ತು ಕರಾವಳಿಯ ವ್ಯಾಪ್ತಿಯ ಪ್ರದೇಶಗಳಲ್ಲಿ ಮುಂದಿನ ನಾಲ್ಕೈದು ದಿನ ಇನ್ನಷ್ಟು ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ,ಕೊಡಗು, ಮೈಸೂರು, ಚಾಮರಾಜನಗರ, ಕೋಲಾರದಲ್ಲಿ ಅ.18ರಂದು ಗುಡುಗು ಸಹಿತ ಜೋರು ಮಳೆಯಾಗುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ಕೊಡಲಾಗಿದೆ. ಗಂಟೆಗೆ 60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಕೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.

Also Read
ನೀವು ಬಚ್ಚಿಟ್ಟುಕೊಂಡ್ರು ಬಿಡೋದಿಲ್ಲ... ಬೋಲ್ಡ್​ ಬ್ಯೂಟಿ ನೇಹಾ ಶರ್ಮಾ ಖಡಕ್​ ವಾರ್ನಿಂಗ್​ | Neha Sharma
ರಾಜ್ಯದಲ್ಲಿ ಮುಂದುವರಿದ ಹಿಂಗಾರು

ಚಿಕ್ಕಮಗಳೂರು, ಹಾಸನದಲ್ಲಿ ಮುಂದಿನ 5 ದಿನ ಮತ್ತು ಶಿವಮೊಗ್ಗ, ದಾವಣಗೆರೆಯಲ್ಲಿ ಅ.19ರಿಂದ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಇರಲಿದೆ.ಬೆಂಗಳೂರು, ಬೆಂ. ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿತ್ರದುರ್ಗದಲ್ಲಿ ಅ.20ರಿಂದ ಮುಂದಿನ 2 ದಿನ, ತುಮಕೂರು ಮತ್ತು ವಿಜಯನಗರದಲ್ಲಿ ಅ.20 ರಂದು ಯೆಲ್ಲೋ ಕೊಡಲಾಗಿದೆ.ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಇರಲಿದೆ.

ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡಗಳ ಕಾರಣ ಈಶಾನ್ಯ ಮಾನ್ಸೂನ್ ಚುರುಕು ಆಗಿದೆ.ಈ ಹಿನ್ನೆಲೆಯಲ್ಲಿ 2-3 ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಅ.22ರವರೆಗೆ ಇದು ಮುಂದುವರಿಯಲಿದೆ.

ಡಾ.ಶ್ರೀನಿವಾಸರೆಡ್ಡಿ, ಹಿರಿಯ ಹವಾಮಾನ ತಜ್ಞ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net