

ಬೆಂಗಳೂರು: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರು ಭಾಗದಲ್ಲಿ ಮಾಡಿದರೆ ಹೆಚ್ಚು ಅನುಕೂಲವಾಗುತ್ತದೆ(It is convenient to do it in the Tumkur side of the airport) ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ(Dr G Parameswara) ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಬಳಿ ನಿರ್ಮಾಣ ಮಾಡುವಂತೆ ಕೇಳುತ್ತಿದ್ದೇವೆ. ತುಮಕೂರಿನ ಭಾಗದಲ್ಲಿ ನಿರ್ಮಾಣವಾದರೆ ಉತ್ತರ ಕರ್ನಾಟಕ ಭಾಗದ 21 ಜಿಲ್ಲೆಗಳಿಗೂ ಅನುಕೂಲವಾಗಲಿದೆ. ಈಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸುಲಭ ಸಂಪರ್ಕವಾಗುತ್ತದೆ ಎಂದರು.
ತುಮಕೂರುವರೆಗೆ ಮೆಟ್ರೋ ಯೋಜನೆ ಡಿಪಿಆರ್ ಇನ್ನು ಅಂತಿಮವಾಗಿಲ್ಲ. ಹೈದ್ರಾಬಾದ್ ಕಂಪನಿಗೆ ನೀಡಲಾಗಿದ್ದು ಡಿಪಿಆರ್ ವರದಿ ನೀಡಿಲ್ಲ. ವರದಿ ನೀಡಿದ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ. ತದನಂತರ ಕೇಂದ್ರ ಸರ್ಕಾರದ ಅನುಮತಿ ಕೇಳುತ್ತೇವೆ ಎಂದು ಹೇಳಿದರು.
ಸಿಎಂ ನೇಮಕ ಮಾಡುವುದು ಹೈಕಮಾಂಡ್. ಶಾಸಕರ ಅಭಿಪ್ರಾಯ ಕೇಳಬೇಕಿಲ್ಲ ಎಂದು ರಾಮನಗರ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಸೂಚನೆ ಶಾಸಕರಿಗೂ ಮತ್ತು ಮಂತ್ರಿಗಳಿಗೂ ಸೇರಿದಂತೆ ಎಲ್ಲರಿಗೂ ಅನ್ವಯವಾಗುತ್ತದೆ. ಪಕ್ಷದಲ್ಲಿ ಯಾರು ಆ ರೀತಿ ಹೇಳಿಕೆ ಕೊಡಬಾರದು ಎಂದು ಹೈಕಮಾಂಡ್ ಸೂಚಿಸಿದ ಮೇಲೆ ಎಲ್ಲರಿಗೂ ಅನ್ವಯವಾಗುತ್ತದೆ. ಅವರಿಗೂ ಹೈಕಮಾಂಡ್ ಮತ್ತೆ ಹೇಳುತ್ತಾರೆ ಎಂದರು.
ಹೈಕಮಾಂಡ್ ಮತ್ತು ಶಾಸಕರು ಆಯ್ಕೆ ಮಾಡುತ್ತಾರೆ. ಮೊದಲು ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ಆನಂತರ ಅವರು ತೀರ್ಮಾನ ಮಾಡುತ್ತಾರೆ. ಬೆಂಬಲ ಸೇರಿದಂತೆ ಬೇರೆಬೇರೆ ವಿಚಾರಗಳನ್ನು ಆಧರಿಸಿ ಪ್ರಕಟಿಸುತ್ತಾರೆ ಎಂದು ಹೇಳಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಿದ್ದಾರೆ. ಅಲ್ಲದೆ, ಸುಮೋಟೊ ದಾಖಲಿಸುವಂತೆಯೂ ತಿಳಿಸಲಾಗಿದೆ ಎಂದರು.
ದೌರ್ಜನ್ಯ, ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ದೂರು ನೀಡಲು ಸಹಾಯವಾಣಿ ಆರಂಭಿಸಲಾಗುವುದು ಎಂದು ಡಾ.ಪರಮೇಶ್ವರ ಹೇಳಿದರು.