ಪಾಕಿಸ್ತಾನದ ಇಸ್ಲಾಮಾಬಾದ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 15 ನವಜಾತ ಶಿಶುಗಳು ದಾರುಣ ಸಾವು!..​Pakistan hospital

​Pakistan hospital fire Islamabad
​Pakistan hospital fire Islamabad
Published on

ಪ್ರಮುಖ ಮುಖ್ಯಾಂಶಗಳು

  • ​ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಪಿಮ್ಸ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.
  • 15 ನವಜಾತ ಶಿಶುಗಳ ಸಾವು, ಒಂದು ಮಗುವನ್ನು ಮಾತ್ರ ಉಳಿಸಿದ ಸಾಧ್ಯವಾಯಿತು ಎಂದ ಸಿಬ್ಬಂದಿ
  • ​ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ ಮತ್ತು ಕೂಲಿಂಗ್ ಕಾರ್ಯಾಚರಣೆ ಮುಂದುವರಿಕೆ.

ಇಸ್ಲಾಮಾಬಾದ್‌: ಇಲ್ಲಿನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದಾಗಿ, 15 ನವಜಾತ ಶಿಶುಗಳು ಸಜೀವ ದಹನಗೊಂಡಿರುವ ಅತ್ಯಂತ ದಾರುಣ ಘಟನೆ ಬುಧವಾರ ಬೆಳಕಿಗೆ ಬಂದಿದೆ.


​ಇಸ್ಲಾಮಾಬಾದ್‌ನ ಪಾಕಿಸ್ತಾನ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (PIMS) ಆಸ್ಪತ್ರೆಯ ಸ್ತ್ರೀ ರೋಗ ವಿಭಾಗದಲ್ಲಿ ಈ ಘಟನೆ ಸಂಭವಿಸಿದೆ. ಈ ವಾರ್ಡ್​ನಲ್ಲಿ ಒಟ್ಟು 16 ನವಜಾತ ಶಿಶುಗಳಿದ್ದವು. ಮತ್ತೊಂದು ಶಿಶುಗೆ ಏನಾಗಿದೆ ಎನ್ನುವ ಮಾಹಿತಿ ಇಲ್ಲ ಎಂದು ಇಲ್ಲಿನ ಮಾಧ್ಯಮಗಳು ವರದಿ ಮಾಡಿದೆ.

ಅವಘಡಕ್ಕೆ ಕಾರಣ ಏನು?

ಸರ್ಕಾರಿ ಆಸ್ಪತ್ರೆಯ ಎಸಿ ವ್ಯವಸ್ಥೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ರಕ್ಷಣಾ ಕಾರ್ಯಕ್ಕೆ ಮುಂದಾದರೂ ಸಹ ಒಂದೇ ಒಂದು ಮಗುವನ್ನು ಮಾತ್ರ ರಕ್ಷಿಸಲು ಸಾಧ್ಯವಾಯಿತು. ಉಳಿದ 15 ನವಜಾತ ಶಿಶುಗಳು ದಟ್ಟ ಹೊಗೆ ಮತ್ತು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸಿದ್ದು, ಸದ್ಯ ಕೂಲಿಂಗ್ ಕಾರ್ಯಾಚರಣೆ ಮುಂದುವರಿದಿದೆ. ಆಸ್ಪತ್ರೆಯ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂಬ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಹೆಚ್ಚಿನ ತನಿಖೆ ನಿರೀಕ್ಷಿಸಲಾಗಿದೆ,

(ಏಜೆನ್ಸೀಸ್)
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net