ವಿಯೆಟ್ನಾಂ ರಾಜಧಾನಿಯಲ್ಲಿ ಭಾರಿ ಸ್ಫೋಟ 6 ಮಂದಿ ದುರ್ಮರಣ | Hanoi Blast

ವಿಯೆಟ್ನಾಂ ರಾಜಧಾನಿ ಹನೋಯ್‌ನಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, 10 ಜನರು ಗಾಯಗೊಂಡಿದ್ದಾರೆ. ಜನನಿಬಿಡ ವಸತಿ ಪ್ರದೇಶದಲ್ಲಿರುವ ಆಹಾರ ಮಳಿಗೆಯೊಂದರಲ್ಲಿ ಈ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.Hanoi Blast
ವಿಯೆಟ್ನಾಂ ರಾಜಧಾನಿಯಲ್ಲಿ ಭಾರಿ ಸ್ಫೋಟ 6 ಮಂದಿ ದುರ್ಮರಣ
ವಿಯೆಟ್ನಾಂ ರಾಜಧಾನಿಯಲ್ಲಿ ಭಾರಿ ಸ್ಫೋಟ 6 ಮಂದಿ ದುರ್ಮರಣWEB
Published on: 

ವಿಯೆಟ್ನಾಂ: ವಿಯೆಟ್ನಾಂ ರಾಜಧಾನಿ ಹನೋಯ್‌ನಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, 10 ಜನರು ಗಾಯಗೊಂಡಿದ್ದಾರೆ. ಜನನಿಬಿಡ ವಸತಿ ಪ್ರದೇಶದಲ್ಲಿರುವ ಆಹಾರ ಮಳಿಗೆಯೊಂದರಲ್ಲಿ ಈ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸ್ಥಳೀಯ ಪೊಲೀಸ್ ಅಧಿಕಾರಿಗಳು ಹಾಗೂ ಸರ್ಕಾರಿ ಮಾಧ್ಯಮಗಳ ಮಾಹಿತಿ ಪ್ರಕಾರ, ಬೆಳಗ್ಗೆ ಸುಮಾರು 8 ಗಂಟೆಗೆ ಡಾಂಗ್ ಡಾ ರಸ್ತೆಯಲ್ಲಿರುವ ಆಹಾರ ಮಳಿಗೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಟ್ಟಡಕ್ಕೆ ಭಾರಿ ಹಾನಿಯಾಗಿದ್ದು, ಅಕ್ಕಪಕ್ಕದ ಕಟ್ಟಡಗಳ ಕಿಟಕಿ ಗಾಜುಗಳು ಪುಡಿಯಾಗಿವೆ ಎಂದು ವರದಿಯಾಗಿದೆ.

ಅಡುಗೆ ಅನಿಲ ಸೋರಿಕೆ ಶಂಕೆ

ವಿಯೆಟ್ನಾಂ ಸಾರ್ವಜನಿಕ ಭದ್ರತಾ ಸಚಿವಾಲಯದ ಪ್ರಾಥಮಿಕ ಮೌಲ್ಯಮಾಪನದ ಪ್ರಕಾರ, ಈ ಸ್ಫೋಟವು ಅಡುಗೆ ಅನಿಲಕ್ಕೆ ಸಂಬಂಧಿಸಿದೆ ಎಂದು ತಿಳಿದುಬಂದಿದೆ. ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

Also Read
ತಾಳಿ ಕಟ್ಟಬೇಕಿದ್ದವನೇ ಪ್ರಾಣ ತೆಗೆದ ! ಪ್ರೇಯಸಿಯನ್ನು 3ನೇ ಮಹಡಿಯಿಂದ ತಳ್ಳಿ ಆತ್ಮಹತ್ಯೆ ಕಥೆ ಹೆಣೆದ| Love Affair
ವಿಯೆಟ್ನಾಂ ರಾಜಧಾನಿಯಲ್ಲಿ ಭಾರಿ ಸ್ಫೋಟ 6 ಮಂದಿ ದುರ್ಮರಣ

ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಶೇಷಗಳಡಿ ಯಾರಾದರೂ ಸಿಲುಕಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಘಟನೆಯ ಕುರಿತು ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಸ್ಫೋಟದ ನಿಖರ ಕಾರಣ ಮತ್ತು ಹಾನಿಯ ಪ್ರಮಾಣದ ಬಗ್ಗೆ ತನಿಖೆ ನಡೆಯುತ್ತಿದೆ.