ವಾಷಿಂಗ್ಟನ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಅಮೆರಿಕವು ಅತ್ಯಂತ ಆಕ್ರಮಣಕಾರಿ ಹೆಜ್ಜೆಯನ್ನಿಟ್ಟಿದೆ. ಇರಾನ್‌ನ ನೂತನ ಸುಪ್ರೀಂ ಲೀಡರ್ ಮುಜ್ತಬಾ ಖಮೇನಿ (Mojtaba Khamenei) ಮತ್ತು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಹಿರಿಯ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 10 ಮಿಲಿಯನ್ ಡಾಲರ್, ಅಂದರೆ ಭಾರತೀಯ ರೂಪಾಯಿ ಮೌಲ್ಯದಲ್ಲಿ ಸುಮಾರು 92,47,48,000 ರೂಪಾಯಿ ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ.