ಇರಾನ್‌ನಲ್ಲಿ ಸುಮಾರು ಎರಡು ವಾರಗಳಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಟ್ರಂಪ್ ತಮ್ಮ 'ಟ್ರೂತ್ ಸೋಶಿಯಲ್' ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. "ಇರಾನ್ ಹಿಂದೆಂದೂ ಕಾಣದ ರೀತಿಯಲ್ಲಿ ಸ್ವಾತಂತ್ರ್ಯಕ್ಕಾಗಿ ಎದುರು ನೋಡುತ್ತಿದೆ. ಅಮೆರಿಕಾ ಸಹಾಯ ಮಾಡಲು ಸಿದ್ಧವಾಗಿ ನಿಂತಿದೆ!" ಎಂದು ಅವರು ಬರೆದಿದ್ದಾರೆ. ಅಷ್ಟೇ ಅಲ್ಲದೆ, ಇರಾನ್ ಸರ್ಕಾರವು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದರೆ ಅಥವಾ ಅವರನ್ನು ಕೊಂದರೆ, ಅಮೆರಿಕಾ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಮತ್ತು ಇರಾನ್ ಮೇಲೆ ಬಲವಾದ ದಾಳಿ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.