ಇತ್ತೀಚೆಗಷ್ಟೇ ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಅವರ ಜಾಗತಿಕ ಸುಂಕದ ನೀತಿಯನ್ನು ರದ್ದುಗೊಳಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಟ್ರಂಪ್, ಸುಪ್ರೀಂ ಕೋರ್ಟ್‌ನ ತೀರ್ಪು ದುರದೃಷ್ಟಕರ. ಆದರೆ ಹಲವು ದೇಶಗಳು ಮತ್ತು ಕಂಪನಿಗಳು ಈಗಾಗಲೇ ಮಾಡಿಕೊಂಡಿರುವ ಒಪ್ಪಂದಕ್ಕೆ ಬದ್ಧವಾಗಿರಲು ಬಯಸುತ್ತವೆ ಎಂದು ಹೇಳಿದ್ದಾರೆ. ಅಲ್ಲದೆ, ತೀರ್ಪಿನ ಹೊರತಾಗಿಯೂ, ಆಡಳಿತವು 15 ಪ್ರತಿಶತದಷ್ಟು ಹೊಸ ಜಾಗತಿಕ ಸುಂಕಗಳನ್ನು ವಿಧಿಸುವುದಾಗಿ ಘೋಷಿಸಿದೆ, ಇದು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ.