ಬಾಂಗ್ಲಾದೇಶದ ಆಂತರಿಕ ವಿಷಯ: ಶೇಖ್ ಹಸೀನಾ ಮರಣದಂಡನೆಗೆ ಚೀನಾ ಪ್ರತಿಕ್ರಿಯೆ | Sheikh Hasina

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ(Sheikh Hasina)
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ(Sheikh Hasina)
Published on
ಬೀಜಿಂಗ್​: ಮಾನವೀಯತೆಯ ವಿರುದ್ಧದ ಅಪರಾಧಗಳು ಪ್ರಕರಣದಲ್ಲಿ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ(Sheikh Hasina) ನ್ಯಾಯಮಂಡಳಿ ನ್ಯಾಯಾಲಯವು ವಿಧಿಸಿದ ಮರಣದಂಡನೆ ಬಗ್ಗೆ ಪ್ರತಿಕ್ರಿಯಿಸಿದ ಚೀನಾ, ಇದು ಬಾಂಗ್ಲಾದ ಆಂತರಿಕ ವಿಷಯ ಎಂದು ಹೇಳಿದೆ.
ಈ ಬಗ್ಗೆ ಮಾತನಾಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್, ಇದು ಬಾಂಗ್ಲಾದೇಶದ ಆಂತರಿಕ ವಿಷಯ ಎಂದು ಬೀಜಿಂಗ್‌ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮುಂದುವರೆದು ಮಾತನಾಡಿದ ನಿಂಗ್​, ಬಾಂಗ್ಲಾದೇಶ ಒಗ್ಗಟ್ಟು, ಸ್ಥಿರತೆ ಮತ್ತು ಅಭಿವೃದ್ಧಿಯನ್ನು ಸಾಧಿಸುತ್ತದೆ. ಬಾಂಗ್ಲಾದೇಶದ ಎಲ್ಲಾ ಜನರೊಂದಿಗೆ ಉತ್ತಮ ನೆರೆಹೊರೆ ಮತ್ತು ಸ್ನೇಹದ ನೀತಿಗೆ ಚೀನಾ ಬದ್ಧವಾಗಿದೆ ಎಂದು ನಿಂಗ್​ ಹೇಳಿದ್ದಾರೆ.

ಶೇಖ್ ಹಸೀನಾಗೆ ಮರಣದಂಡನೆ ಶಿಕ್ಷೆ

2024ರ ವಿದ್ಯಾರ್ಥಿ ದಂಗೆಯ ಸಂದರ್ಭದಲ್ಲಿ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಎಸಗಿದ್ದಕ್ಕಾಗಿ ನ್ಯಾಯಮಂಡಳಿ ನ್ಯಾಯಾಲಯವು ಶೇಖ್ ಹಸೀನಾರನ್ನು ತಪ್ಪಿತಸ್ಥರೆಂದು ಘೋಷಿಸಿದ ನಂತರ ಸೋಮವಾರ ಮರಣದಂಡನೆ ವಿಧಿಸಲಾಯಿತು. ಅಲ್ಲದೆ, ಪದಚ್ಯುತಗೊಂಡ ನಂತರ ಹಸೀನಾ ಭಾರತಕ್ಕೆ ಪಲಾಯನ ಮಾಡಿ ಇಲ್ಲಿ ವಾಸಿಸುತ್ತಿದ್ದರಿಂದ ವಿಚಾರಣೆಗೆ ಒಳಪಡಿಸಲಾಯಿತು.
ಶೇಖ್ ಹಸೀನಾ ಜತೆಗೆ, ಅವರ ಸಹ-ಆರೋಪಿ ಮತ್ತು ಬಾಂಗ್ಲಾದೇಶದ ಮಾಜಿ ಗೃಹ ಸಚಿವ ಅಸದುಜ್ಜಮಾನ್ ಖಾನ್ ಕಮಲ್​ರಿಗೂ ಮರಣದಂಡನೆ ವಿಧಿಸಲಾಯಿತು. ಅದರೆ, ಅವರ ಇತರ ಸಹ-ಆರೋಪಿ, ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್​ರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. ಕಳೆದ ಜುಲೈನಲ್ಲಿ ತಪ್ಪೊಪ್ಪಿಕೊಂಡ ನಂತರ ತನಿಖೆಗೆ ಸಹಕರಿಸಿದ ಕಾರಣ ಅವರಿಗೆ ಈ ಶಿಕ್ಷೆ ವಿಧಿಸಲಾಯಿತು. ತೀರ್ಪು ಪ್ರಕಟವಾಗುತ್ತಿದ್ದಾಗ ನ್ಯಾಯಾಲಯದಲ್ಲಿ ಹಾಜರಿದ್ದ ಏಕೈಕ ಆರೋಪಿಯೂ ಜನರಲ್ ಚೌಧರಿ ಆಗಿದ್ದರು.
ವಿಶ್ವಸಂಸ್ಥೆಯ ಹಕ್ಕುಗಳ ಪ್ರಕಾರ, ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದ ದಂಗೆಯ ಸಂದರ್ಭದಲ್ಲಿ ಕಳೆದ ವರ್ಷ ಜುಲೈ 15 ರಿಂದ ಆಗಸ್ಟ್ 15 ರವರೆಗೆ ಸುಮಾರು 1,400 ಜನರು ಸಾವನ್ನಪ್ಪಿದ್ದಾರೆ,(ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net