ಕಾರ್ಯಕ್ರಮವನ್ನು ಉದ್ಘಾಟಿಸಿದ ಬೀಳಗಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರಾದ ಜೆ. ಟಿ. ಪಾಟೀಲರು, “ಭಾರತೀಯರು, ವಿಶೇಷವಾಗಿ ಕನ್ನಡಿಗರು, ಎಲ್ಲಿ ಹೋದರೂ ತಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮರೆಯದೆ ಅದಕ್ಕೆ ಗೌರವ ತಂದುಕೊಡುವ ಕಾರ್ಯ ಮಾಡುತ್ತಿದ್ದಾರೆ. ವಿದೇಶದಲ್ಲಿದ್ದರೂ ತಮ್ಮ ಭಾಷೆ, ಆಹಾರ ಪದ್ಧತಿ ಹಾಗೂ ಸಂಪ್ರದಾಯಗಳನ್ನು ಉಳಿಸಿಕೊಂಡು ಹೋಗುತ್ತಿರುವುದು ಹೆಮ್ಮೆಯ ಸಂಗತಿ” ಎಂದು ಹೇಳಿದರು. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದೇಶದಲ್ಲಿರುವ ಕನ್ನಡಿಗರ ನಡುವೆ ಒಗ್ಗಟ್ಟು ಮತ್ತು ಸಂಸ್ಕೃತಿಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.