ಮಾಜಿ ಪಿಎಂ ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ; ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಪಾಕ್ ಸುಪ್ರೀಂಕೋರ್ಟ್ ಆದೇಶ | Ex PM Imran Khan

ಇಮ್ರಾನ್ ಖಾನ್
ಇಮ್ರಾನ್ ಖಾನ್
Published on
ಇಸ್ಲಾಮಾಬಾದ್: ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್(Ex PM Imran Khan) ಅವರ ಆರೋಗ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನ ಸುಪ್ರೀಂಕೊರ್ಟ್, ಮಂಗಳವಾರ(ಆ. 18) ಅವರನ್ನು ಜೈಲಿನಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಆದೇಶಿಸಿದೆ ಎಂದು ವರದಿಯಾಗಿದೆ.
73 ವರ್ಷದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು 2022ರಲ್ಲಿ ಅಧಿಕಾರ ಕಳೆದುಕೊಂಡ ಬಳಿಕ ವಿವಿಧ ರಾಜಕೀಯ ಪ್ರೇರಿತ ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿ 2023 ಆಗಸ್ಟ್​ ತಿಂಗಳಿನಿಂದಲೂ ಜೈಲಿನಲ್ಲಿದ್ದಾರೆ. ಇತ್ತೀಚೆಗೆ ಜೈಲಿನಲ್ಲಿ ಅವರ ಆರೋಗ್ಯ ತೀರಾ ಹದಗೆಟ್ಟಿದ್ದು, ಅವರ ಬಲಗಣ್ಣಿನ ಗಮನಾರ್ಹ ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಅವರ ಪುತ್ರರು, ವಕೀಲರು ಕಳವಳ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆ​ ವೈದ್ಯಕೀಯ ನೆರವು ಕೋರಿ ಇಮ್ರಾನ್ ಖಾನ್ ಕುಟುಂಬಸ್ಥರು ಮತ್ತು ಪಿಟಿಐ ಪಕ್ಷದ ನಾಯಕರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್​, 48 ಗಂಟೆಗಳ ಒಳಗೆ ಇಮ್ರಾನ್ ಖಾನ್ ಅವರನ್ನು ಶಿಫಾ ಅಂತರರಾಷ್ಟ್ರೀಯ ಆಸ್ಪತ್ರೆಗೆ ಸ್ಥಳಾಂತರಿಸಲು ಮತ್ತು ಸೆಪ್ಟೆಂಬರ್ 16ರವರೆಗೆ ಅಲ್ಲಿಯೇ ಚಿಕಿತ್ಸೆ ಪಡೆಯಲು ಅವಕಾಶ ನೀಡಿ ಆದೇಶ ನೀಡಿದೆ.

ಸುಪ್ರೀಂಕೋರ್ಟ್ ಆದೇಶ ಸ್ವಾಗತಿಸಿದ ಪಿಟಿಐ

ಇಮ್ರಾನ್ ಖಾನ್ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಸ್ವಾಗತಿಸಿರುವ ಪಿಟಿಐ ಪಕ್ಷದ ವಕ್ತಾರ ಜುಲ್ಪಿಕರ್ ಬುಖಾರಿ, ಇದು ತುಂಬಾ ಸ್ವಾಗತಾರ್ಹ ಆದೇಶ. ಮತ್ತು ಇದು ಬೇಗ ಆಗಿದ್ದರೆ ಅವರ ಕಣ್ಣು ಮತ್ತು ಸಾಮಾನ್ಯ ಆರೋಗ್ಯ ಇಷ್ಟೊಂದು ಹದಗೆಡುತ್ತಿರಲಿಲ್ಲ ಎಂದು ನಾವು ಬಯಸುತ್ತೇವೆ. ಎಲ್ಲಾ ರೀತಿ ಗುಣಮುಖರಾಗುವವರೆಗೂ ಅವರು ಆಸ್ಪತ್ರೆಯಲ್ಲಿಯೇ ಇರಬೇಕು ಎಂದು ಹೇಳಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net