ಇಸ್ರೇಲ್ ಮತ್ತು ಅಮೆರಿಕದ ಒತ್ತಡಕ್ಕೆ ಮಣಿಯದ ಇರಾನ್ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಯುಎಇಯ ಅತಿದೊಡ್ಡ ತೈಲ ಸಂಸ್ಕರಣಾಗಾರವಾದ ADNOC ರುವೈಸ್ ಮೇಲೆ ಇರಾನ್ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿದೆ. ದಿನಕ್ಕೆ 837,000 ಬ್ಯಾರೆಲ್ ಕಚ್ಚಾ ತೈಲ ನಿರ್ವಹಿಸುವ ಈ ಸಂಸ್ಕರಣಾಗಾರದ ಮೇಲಿನ ದಾಳಿಯು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಖಲೀಬಾಫ್, ನಾವು ಕದನ ವಿರಾಮ ಬಯಸುತ್ತಿಲ್ಲ, ಪ್ರತಿರೋಧ ಮುಂದುವರಿಸುತ್ತೇವೆ ಎಂದು ಗುಡುಗಿದ್ದಾರೆ(ಏಜೆನ್ಸೀಸ್).