ಇರಾನ್ ಮೇಲಿನ ಅಮೆರಿಕದ ನೌಕಾ ದಿಗ್ಬಂಧನವನ್ನು ತೆರವುಗೊಳಿಸಿದರೆ, ಜಾಗತಿಕ ತೈಲ ವ್ಯಾಪಾರದ ಜೀವನಾಡಿಯಾಗಿರುವ ಹೊರ್ಮುಜ್ ಜಲಸಂಧಿಯನ್ನು ಮರುಮುಕ್ತಗೊಳಿಸುವುದಾಗಿ ಇರಾನ್ ಪ್ರಸ್ತಾಪ ನೀಡಿತ್ತು. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಪ್ರಸ್ತಾಪವನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ. ಇರಾನ್‌ನ ಪರಮಾಣು ಕಾರ್ಯಕ್ರಮದ ಮಾತುಕತೆಯನ್ನು ಮುಂದೂಡಿ, ಕೇವಲ ಜಲಸಂಧಿಯ ವ್ಯವಹಾರಕ್ಕೆ ಒಪ್ಪಲು ಸಾಧ್ಯವಿಲ್ಲ ಎಂದು ವಾಷಿಂಗ್ಟನ್ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ತನ್ನ ನೌಕಾಪಡೆಯನ್ನು ಹೊರ್ಮುಜ್ ಬಳಿ ಮತ್ತಷ್ಟು ಬಲಪಡಿಸಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ಈ ಮಾರಕ ಎಚ್ಚರಿಕೆ ನೀಡಿದೆ.