ಹಾಂಕಾಂಗ್​ ಅಗ್ನಿ ದುರಂತ: ಸಾವಿನ ಸಂಖ್ಯೆ 44ಕ್ಕೆ ಏರಿಕೆ!

Hong Kong fire tragedy
Hong Kong fire tragedy
Published on
ಹಾಂಕಾಂಗ್: ಹಾಂಕಾಂಗ್ ನ್ಯೂ ಟೆರಿಟರಿಸ್‌ನ ತೈ ಪೋ ಜಿಲ್ಲೆಯ ವಸತಿ ಸಮುಚ್ಚಯೊಂದರಲ್ಲಿ ಬುಧವಾರ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಕೆನ್ನಾಲಿಗೆ 44 ಜನರು ಬಲಿಯಾಗಿದ್ದಾರೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ನಗರದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 300ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಕನಿಷ್ಠ 29 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಏಳು ಜನರ ಸ್ಥಿತಿ ಗಂಭೀರವಾಗಿದೆ. ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ನರಹತ್ಯೆಯ ಶಂಕೆಯ ಮೇಲೆ ಹಾಂಗ್ ಕಾಂಗ್‌ನಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.ಆದರೆ, ಆರೋಪಿಗಳ ಬಗ್ಗೆ ಯಾವುದೇ ವಿವರಗಳನ್ನು ನೀಡಿಲ್ಲ.

ಧಗಧಗನೇ ಉರಿದ ಕಟ್ಟಡಗಳು

ವಸತಿ ಸಂಕೀರ್ಣದ ಹೊರಭಾಗದಲ್ಲಿ ಸ್ಥಾಪಿಸಲಾದ ಬಿದಿರಿನ ಸ್ಕ್ಯಾಫೋಲ್ಡಿಂಗ್​ಗೆ(ಬಿದಿರಿನ ರಚನೆ) ಬೆಂಕಿ ಹೊತ್ತಿಕೊಂಡಿದೆ. ಬಳಿಕ ಕಟ್ಟಡದ ಇತರ ಭಾಗಗಳಿಗೆ ಅವರಿಸಿಕೊಂಡಿದೆ. ವಸತಿ ಸಂಕೀರ್ಣವು ಎಂಟು ಬ್ಲಾಕ್‌ಗಳನ್ನು ಹೊಂದಿದ್ದು, ಸುಮಾರು 2,000 ಅಪಾರ್ಟ್‌ಮೆಂಟ್‌ಗಳು ಇದ್ದು, ಅಂದಾಜು 4,800 ಜನರನ್ನು ವಾಸವಿದ್ದರು ಎಂದು ವರದಿ ಉಲ್ಲೇಖಿಸಿದೆ.
ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಮತ್ತು ಕಟ್ಟಡಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು 140 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು 60 ಆಂಬ್ಯುಲೆನ್ಸ್‌ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಬುಧವಾರ ರಾತ್ರಿಯ ಹೊತ್ತಿಗೆ, ಕೆಲವು ನಿವಾಸಿಗಳು ಕಟ್ಟಡಗಳ ಒಳಗೆ ಸಿಲುಕಿಕೊಂಡಿದ್ದಾರೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net