ಯುಎಇನಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯ ಪ್ರಜೆಗಳು ಸೇರಿ 14 ಮಂದಿ ಸಾ*: 30ಕ್ಕೂ ಹೆಚ್ಚು ಜನರಿಗೆ ಗಾಯ | UAE

ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಗುರುವಾರ(ನ. 12) ಟ್ರಕ್​ವೊಂದು ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತೀಯರು ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ. ಮತ್ತು 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಯುಎಇನಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯ ಪ್ರಜೆಗಳು ಸೇರಿ 14 ಮಂದಿ ಸಾ*: 30ಕ್ಕೂ ಹೆಚ್ಚು ಜನರಿಗೆ ಗಾಯ | UAE
Published on: 

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಗುರುವಾರ(ನ. 12) ಟ್ರಕ್​ವೊಂದು ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತೀಯರು ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ. ಮತ್ತು 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಫುಜೈರಾ ಎಮಿರೇಟ್‌ನ ಪ್ರವೇಶದ್ವಾರದಲ್ಲಿರುವ ರಸ್ತೆಯೊಂದರಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯ ರಾತ್ರಿ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸರಿಣಿ ವಾಹನಗಳಿಗೆ ಡಿಕ್ಕಿ ಬಳಿಕ ಟ್ರಕ್​ಗೆ ಬೆಂಕಿ ಹೊತ್ತಿಕೊಂಡಿದೆ. ಆ ಬೆಂಕಿ ಇತರೆ ವಾಹನಗಳಿಗೆ ವ್ಯಾಪಿಸಿದ ಪರಿಣಾಮ ಹಲವು ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಯುಎಇ ಆಂತರಿಕ ಸಚಿವಾಲಯ, ರಸ್ತೆಯಲ್ಲಿ ಚಲಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್​ವೊಂದು, ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಹಲವು ರಸ್ತೆಯಲ್ಲಿ ನಿಂತಿದ್ದ ಹಲವು ವಾಹನಗಳಿಗೆ ಅಪ್ಪಳಿಸಿದೆ. ಬಳಿಕ ಟ್ರಕ್​ಗೆ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಇತರೆ ವಾಹನಗಳಿಗೂ ಅದು ವ್ಯಾಪಿಸಿ ಭಾರೀ ಪ್ರಮಾಣದಲ್ಲಿ ಪ್ರಾಣಹಾನಿ ಸಂಭವಿಸಿದೆ ಎಂದು ತಿಳಿಸಿದೆ.

Also Read
ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ; ಬೆಂಗಳೂರು-ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ: ಸಂಚಾರ ಮಾರ್ಗ ಬದಲಾವಣೆ | PM Modi
ಯುಎಇನಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯ ಪ್ರಜೆಗಳು ಸೇರಿ 14 ಮಂದಿ ಸಾ*: 30ಕ್ಕೂ ಹೆಚ್ಚು ಜನರಿಗೆ ಗಾಯ | UAE

ಘಟನೆ ಬಳಿಕ ಪೊಲೀಸರು, ನಾಗರಿಕ ರಕ್ಷಣಾ ತಂಡಗಳು ಸೇರಿದಂತೆ ತುರ್ತು ಸೇವಾ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಹಲವಾರು ಗಾಯಾಗಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮತ್ತು ಬೆಂಕಿಯಲ್ಲಿ ಸಜೀವ ದಹನವಾದವರನ್ನು ಗುರುತಿಸಲು ಅಧಿಕಾರಿಗಳು ಡಿಎನ್‌ಎ (DNA) ಪರೀಕ್ಷೆಗಳನ್ನು ಬಳಸುತ್ತಿದ್ದಾರೆ ಎನ್ನಲಾಗಿದೆ.

ದುಬೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು, ಮೃತಪಟ್ಟವರಲ್ಲಿ ಭಾರತೀಯ ಪ್ರಜೆಗಳೂ ಇದ್ದಾರೆ ಎಂದು ಹೇಳಿದೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಕಚೇರಿ, ರಾಯಭಾರಿ ಕಚೇರಿಯೂ ಮೃತರ ಕುಟುಂಬಗಳನ್ನು ಸಂಪರ್ಕಿಸಿದೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ಮತ್ತು ಬೆಂಬಲವನ್ನು ಒದಗಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದೆ (ಏಜೆನ್ಸೀಸ್).