ಟ್ರಂಪ್ರೊಂದಿಗಿನ ತಮ್ಮ ಸಂಭಾಷಣೆ ಉತ್ಸಾಹಭರಿತ ಮತ್ತು ಆಕರ್ಷಕವಾಗಿತ್ತು ಎಂದು ಪ್ರಧಾನಿ ಹೇಳಿದ್ದರು. ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿನ ಪ್ರಗತಿಯನ್ನು ನಾವು ಪರಿಶೀಲಿಸಿದ್ದೇವೆ ಮತ್ತು ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದೇವೆ. ಅಲ್ಲದೆ, ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ ಭಾರತ ಮತ್ತು ಅಮೆರಿಕ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ ಎಂದು ಪ್ರಧಾನಿ ಮೋದಿ ಹೇಳಿದ್ದರು.