ಟೆಹ್ರಾನ್: ವಿಶ್ವಸಂಸ್ಥೆ ಹಾಗೂ ಜಾಗತಿಕ ಮಾರುಕಟ್ಟೆಯ ತೀವ್ರ ಒತ್ತಡದ ಬೆನ್ನಲ್ಲೇ ಅಮೆರಿಕ ಮತ್ತು ಇರಾನ್ ನಡುವೆ ಐತಿಹಾಸಿಕ ಶಾಂತಿ ಒಪ್ಪಂದದ ಸಿದ್ಧತೆಗಳು ನಡೆದಿವೆಯಾದರೂ, ಇರಾನ್ ಈಗ ಅಮೆರಿಕದ ಮುಂದೆ ಕಠಿಣ ಷರತ್ತುಗಳನ್ನು ವಿಧಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜತೆಗಿನ ಮಹಾ ಒಪ್ಪಂದ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೊರ್ಮುಜ್ ಜಲಸಂಧಿಯ ಮೇಲಿನ ನೌಕಾ ದಿಗ್ಬಂಧನವನ್ನು ತೆರವುಗೊಳಿಸಲಾಗುವುದು ಎಂದು ಘೋಷಿಸಿದ ಬೆನ್ನಲ್ಲೇ ಇರಾನ್ ತನ್ನ ರಾಜತಾಂತ್ರಿಕ ದಾಳ ಉರುಳಿಸಿದೆ.