ಫೆಬ್ರವರಿ 28 ರಿಂದ ಆರಂಭವಾದ ಈ ಸಂಘರ್ಷದಲ್ಲಿ, ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಹಡಗುಗಳ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಈ ಕುರಿತು ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ 'ಟ್ರೂತ್ ಸೋಶಿಯಲ್'ನಲ್ಲಿ ಪೋಸ್ಟ್ ಮಾಡಿದ್ದ ಟ್ರಂಪ್, "ಇರಾನ್ ಇಂದಿನಿಂದ 48 ಗಂಟೆಗಳ ಒಳಗೆ ಹಾರ್ಮುಜ್ ಜಲಸಂಧಿಯನ್ನು ಯಾವುದೇ ಬೆದರಿಕೆ ಇಲ್ಲದೆ ಸಂಪೂರ್ಣವಾಗಿ ಮುಕ್ತಗೊಳಿಸದಿದ್ದರೆ, ಅಮೆರಿಕವು ಇರಾನ್‌ನ ಅತಿದೊಡ್ಡ ವಿದ್ಯುತ್ ಸ್ಥಾವರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿ ಅವುಗಳನ್ನು ಧ್ವಂಸಗೊಳಿಸಲಿದೆ," ಎಂದು ಎಚ್ಚರಿಸಿದ್ದರು.