ಇರಾನ್‌ನ ಅರೆ-ಅಧಿಕೃತ ಸುದ್ದಿ ಸಂಸ್ಥೆ ತಸ್ನಿಮ್ ವರದಿ ಮಾಡಿರುವಂತೆ, ಇಸ್ರೇಲ್ ನಡೆಸುತ್ತಿರುವ ಸರಣಿ ದಾಳಿಗಳು ಕದನ ವಿರಾಮದ ಸ್ಪಷ್ಟ ಉಲ್ಲಂಘನೆಯಾಗಿವೆ. ಇರಾನ್ ಪ್ರಕಾರ, ಈ ಒಪ್ಪಂದವು ಲೆಬನಾನ್‌ನ ಇಸ್ಲಾಮಿಕ್ ರೆಸಿಸ್ಟೆನ್ಸ್ (ಹಿಜ್ಬುಲ್ಲಾ) ಸೇರಿದಂತೆ ಎಲ್ಲಾ ರಂಗಗಳಲ್ಲಿ ಸಂಘರ್ಷವನ್ನು ನಿಲ್ಲಿಸುವ ಉದ್ದೇಶ ಹೊಂದಿತ್ತು. ಆದರೆ ಇಸ್ರೇಲ್ ಈ ಮಾತುಗಳನ್ನು ಗಾಳಿಗೆ ತೂರಿ ದಾಳಿ ಮುಂದುವರಿಸಿರುವುದು ಇರಾನ್‌ನ ಆಕ್ರೋಶಕ್ಕೆ ಕಾರಣವಾಗಿದೆ. ಒಂದು ವೇಳೆ ದಾಳಿಗಳು ತಕ್ಷಣ ನಿಲ್ಲದಿದ್ದರೆ, ತಾನು ಒಪ್ಪಂದಕ್ಕೆ ಬದ್ಧವಾಗಿರುವುದಿಲ್ಲ ಎಂದು ಇರಾನ್ ಮೂಲಗಳು ತಿಳಿಸಿವೆ.